ಬಾಲಿವುಡ್ ನಟ ಸಂಜಯ್ ದತ್ ಗೆ ಮೂರನೇ ಹಂತದ ಶ್ವಾಸಕೋಶದ ಕ್ಯಾನ್ಸರ್

ಬಾಲಿವುಡ್ ನಟ ಸಂಜಯ್ ದತ್ ಗೆ ಮೂರನೇ ಹಂತದ ಶ್ವಾಸಕೋಶದ ಕ್ಯಾನ್ಸರ್

HSA   ¦    Aug 12, 2020 10:01:34 AM (IST)
ಬಾಲಿವುಡ್ ನಟ ಸಂಜಯ್ ದತ್ ಗೆ ಮೂರನೇ ಹಂತದ ಶ್ವಾಸಕೋಶದ ಕ್ಯಾನ್ಸರ್

ನವದೆಹಲಿ: ಬಾಲಿವುಡ್ ನಟ ಸಂಜಯ್ ದತ್ ಅವರಿಗೆ ಮೂರನೇ ಹಂತದ ಶ್ವಾಸಕೋಶದ ಕ್ಯಾನ್ಸರ್ ಪತ್ತೆಯಾಗಿದ್ದು, ಇಡೀ ಬಾಲಿವುಡ್ ಬೆಚ್ಚಿಬಿದ್ದಿದೆ.

ಸಂಜಯ್ ದತ್ ಅವರು ಕಳೆದ ವಾರ ಹಠಾತ್ ಆಗಿ ಅನಾರೋಗ್ಯಕ್ಕೆ ಒಳಗಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೋಮವಾರ ಅವರು ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದರು.

ಸಂಜಯ್ ದತ್ ಅವರಿಗೆ ಮೂರನೇ ಹಂತದ ಶ್ವಾಸಕೋಶದ ಕ್ಯಾನ್ಸರ್ ಕಾಣಿಸಿಕೊಂಡಿದ್ದು, ಅವರು ಅಮೆರಿಕಾಗೆ ಚಿಕಿತ್ಸೆಗೆ ತೆರಳುವರು ಎಂದು ವರದಿಗಳು ತಿಳಿಸಿವೆ.

ಬಾಲಿವುಡ್ ನ ಹಲವಾರು ಮಂದಿ ಟ್ವೀಟ್ ಮಾಡಿ, ಇದರಿಂದ ನೀವು ಆದಷ್ಟು ಬೇಗ ಪಾರಾಗಿ ಬನ್ನಿ ಎಂದು ಹಾರೈಸಿದ್ದಾರೆ.