ರಿಷಬ್ ಶೆಟ್ಟಿ ನಟನೆಯ ಹೀರೋ ಸಿನಿಮಾದ ಟ್ರೈಲರ್ ರಿಲೀಸ್

ರಿಷಬ್ ಶೆಟ್ಟಿ ನಟನೆಯ ಹೀರೋ ಸಿನಿಮಾದ ಟ್ರೈಲರ್ ರಿಲೀಸ್

MS   ¦    Jan 14, 2021 04:33:24 PM (IST)
ರಿಷಬ್ ಶೆಟ್ಟಿ ನಟನೆಯ ಹೀರೋ ಸಿನಿಮಾದ ಟ್ರೈಲರ್ ರಿಲೀಸ್

ಬೆಂಗಳೂರು: ಪ್ರಪ್ರಥಮ ಬಾರಿಗೆ ಆಕ್ಷನ್ ಹೀರೋ ಆಗಿ ಕಾಣಿಸಿಕೊಂಡಿರುವ ರಿಷಬ್ ಶೆಟ್ಟಿ ನಾಯಕ ನಟನಾಗಿ ನಟಿಸಿರುವ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಈ ಚಿತ್ರವನ್ನು ಲಾಕ್ ಡೌನ್ ಸಮಯದಲ್ಲಿ ಚಿತ್ರೀಕರಿಸಿದ್ದು, ಇದೀಗ ಪ್ರೇಕ್ಷಕರ ಎದುರು ಬರಲು ಸಜ್ಜಾಗಿದೆ.

ಈ ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಗಾನವಿ ಲಕ್ಷ್ಮಣ್ ನಾಯಕಿಯಾಗಿ ನಟಿಸಿದ್ದಾರೆ. ಹೀರೋ ಚಿತ್ರವನ್ನು ಎಂ ಭರತ್ ರಾಜ್ ನಿರ್ದೇಶಿಸಿದ್ದು, ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿದ್ದ.

ಕಾಮಿಡಿ ತ್ರಿಲ್ಲರ್ ಆಗಿರುವ ಈ ಚಿತ್ರ ಚಿಕ್ಕಮಂಗಳೂರಿನ ಒಂದರಲ್ಲಿ 50 ದಿನಗಳ ಚಿತ್ರೀಕರಣದಿಂದ ಮೂಡಿಬಂದಿದೆ. ಇದೀಗ ಈ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು, ಕೇವಲ ಆರು ಗಂಟೆಗಳಲ್ಲಿ 1.7 ಲಕ್ಷ ಜನ ನೋಡಿದ್ದು, 38 ಸಾವಿರಕ್ಕೂ ಹೆಚ್ಚು ಜನ ಇಷ್ಟಪಟ್ಟಿದ್ದಾರೆ.