ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಗೆ ಕೊರೊನಾ ದೃಢ

ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಗೆ ಕೊರೊನಾ ದೃಢ

YK   ¦    Jul 09, 2020 03:50:56 PM (IST)
ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಗೆ ಕೊರೊನಾ ದೃಢ

ಬೆಂಗಳೂರು: ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರಿಗೆ ಕೋವಿಡ್ ೧೯ ಪರೀಕ್ಷೆಗೆ ಒಳಗಾಗಿದ್ದು, ಇದೀಗ ಕೊರೊನಾ ಇರುವುದು ದೃಢವಾಗಿದೆ.

ಈಚೆಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೆ ಕೊರೊನಾ ದೃಢಪಟ್ಟಿತ್ತು. ರಾಕ್ ಲೈನ್ ವೆಂಕಟೇಶ್ ಅವರು ಈಚೆಗೆ ಸುಮಲತಾ ಅವರೊಂದೊಗೆ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಹಿರಿಯ ನಟ ದೊಡ್ಡಣ್ಣ ಭಾಗಿಯಾಗಿದ್ದರು.

ಇದೀಗ ರಾಕ್ ಲೈನ್ ವೆಂಕಟೇಶ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.○