ಹೃದಯಾಘಾತ: ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ವಿಧಿವಶ

ಹೃದಯಾಘಾತ: ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ವಿಧಿವಶ

YK   ¦    Oct 11, 2019 09:30:51 AM (IST)
ಹೃದಯಾಘಾತ: ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ವಿಧಿವಶ

ಬೆಂಗಳೂರು: ಸ್ಯಾಕ್ಸೋಫೋನ್‌ ವಾದಕ ಕದ್ರಿ ಗೋಪಾಲನಾಥ್(69) ಅವರು ಹೃದಯಾಘಾತದಿಂದ ಶುಕ್ರವಾರ ನಸುಕಿನ ಜಾವ ವಿಧಿವಶರಾಗಿದ್ದಾರೆ.

ಗೋಪಾಲನಾಥ್ ಅವರ ಸ್ಯಾಕ್ಸೋಫೋನ್ ವಾದಗಳಿಗೆ ಮನಸೋಲದರವರೇ ಇಲ್ಲ.  ಪ್ರವೀಣ್ ಗೋಡ್ಖಿಂಡಿ ಅವರ ಜತೆಗಿನ ಜುಗಲ್ ಬಂದಿ ಅಲ್ಬಂ ರಾಗ್ ರಂಗ್ 1998ರಲ್ಲಿ ಬಿಡುಗಡೆಯಾಯತು.

 1949 ಡಿಸೆಂಬರ್ 11ರಂದು ಮಂಗಳೂರಿನಲ್ಲಿ ಜನಿಸಿದ ಅವರು ಸ್ಯಾಕ್ಸೋಫೊನ್ ವಾದನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಅಳವಡಿಕೆಯಿಂದ ವಿಶ್ವಪ್ರಸಿದ್ಧಿ ಪಡೆದವರಾಗಿದ್ದಾರೆ. ಚೆನ್ನೈನಲ್ಲಿ ನೆಲೆಸಿದ್ದ ಗೋಪಾಲನಾಥ್ ಅವರು ಅನಾರೋಗ್ಯದ ಕಾರಣದಿಂದ ನಾಲ್ಕು ತಿಂಗಳ ಹಿಂದೆ ಮಂಗಳೂರಿಗೆ ವಾಪಸಾಗಿದ್ದರು. ಗುರುವಾರ ರಾತ್ರಿ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ನಸುಕಿನ ಜಾವ 4.45ಕ್ಕೆ ನಿಧನರಾದರು ಎಂದು ಗೋಪಾಲನಾಥ್ ಅವರ ಮಗ, ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ತಿಳಿಸಿದರು.