ನಟ ಅಮೀರ್ ಖಾನ್ ಮನೆಕೆಲಸದ ಸಿಬ್ಬಂದಿಗೆ ಕೊರೋನಾ ಸೋಂಕು

ನಟ ಅಮೀರ್ ಖಾನ್ ಮನೆಕೆಲಸದ ಸಿಬ್ಬಂದಿಗೆ ಕೊರೋನಾ ಸೋಂಕು

HSA   ¦    Jun 30, 2020 08:04:59 PM (IST)
ನಟ ಅಮೀರ್ ಖಾನ್ ಮನೆಕೆಲಸದ ಸಿಬ್ಬಂದಿಗೆ ಕೊರೋನಾ ಸೋಂಕು

ಮುಂಬಯಿ: ಬಾಲಿವುಡ್ ನಟ ಅಮೀರ್ ಖಾನ್ ಮನೆಯಲ್ಲಿ ಕೆಲಸ ಮಾಡುತ್ತಿದ್ದವರೊಬ್ಬರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಎಲ್ಲರೂ ಈಗ ಹೋಂ ಕ್ವಾರಂಟೈನ್ ಆಗಿದ್ದಾರೆ.

ಅಮೀರ್ ಖಾನ್ ಅವರು ಈ ಬಗ್ಗೆ ಟ್ವೀಟ್ ಮಾಡಿರುವರು. ಮನೆಯವರೆಲ್ಲರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಅವರಿಗೆ ಯಾರಿಗೂ ಸೋಂಕು ಪತ್ತೆಯಾಗಿಲ್ಲ ಎಂದು ಟ್ವೀಟ್ ಮಾಡಿರುವರು.

ಆದರೆ ಸ್ವತಃ ಅಮೀರ್ ಖಾನ್ ಅವರು ಇನ್ನಷ್ಟೇ ಪರೀಕ್ಷೆಗೆ ಒಳಪಡಬೇಕಾಗಿದೆ. ಅಮೀರ್ ತಾಯಿ ಕೂಡ ಇನ್ನಷ್ಟೇ ಕೊರೋನಾ ಪರೀಕ್ಷೆಗೆ ಒಳಪಡಬೇಕಾಗಿದೆ.

ಅಮೀರ್ ಖಾನ್ ಸುತ್ತಮುತ್ತಲು ಈಗ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ.