News Kannada
Saturday, February 24 2024
ಮನರಂಜನೆ

32 ವರ್ಷಗಳ ಬಳಿಕ ತೆರೆಯಲ್ಲಿ ಮತ್ತೆ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಬಿಗ್ ಬಿ-ರಜನಿ

Big B and Rajini are reuniting on screen after 32 years
Photo Credit : News Kannada

ಬರೋಬ್ಬರಿ 32 ವರ್ಷಗಳ ಬಳಿಕ ಭಾರತೀಯ ಸಿನಿಮಾ ರಂಗದ ಇಬ್ಬರು ದಿಗ್ಗಜರಾದ ಬಿಗ್‌ ಬಿ ಮತ್ತು ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರು ಮತ್ತೆ ತೆರೆ ಮೇಲೆ ಒಂದಾಗಲಿದ್ದಾರೆ. ಇದು ಇವರ ಅಭಿಮಾನಿಗಳಿಗೆ ಮತ್ತಷ್ಟು ಸಂತಹ ಹೆಚ್ಚಿಸಿದೆ.

ಇತ್ತೀಚೆಗೆ ಬಿಡುಗಡೆಯಾದ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್’ ಸಿನೆಮಾ ಭರ್ಜರಿ ಯಶಸ್ಸು ಕಂಡಿದ್ದು, ಇದರ ಬೆನ್ನಲ್ಲೇ ರಜನಿಕಾಂತ್ ಅವರ ಮತ್ತೊಂದು ಚಿತ್ರ ‘ತಲೈವಾ 170’ ನಿರ್ಮಾಣಕ್ಕೆ ಲೈಕಾ ಪ್ರೊಡಕ್ಷನ್ಸ್ ಮುಂದಾಗಿದೆ.

‘ತಲೈವಾ 170’ ಸಿನಿಮಾದಲ್ಲಿ ರಜನಿಕಾಂತ್ ಜೊತೆಗೆ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಸಹ ಅಭಿನಯಸಲಿದ್ದಾರೆ ಎಂದು ಹೇಳಲಾಗಿದ್ದು, ಈ ಚಿತ್ರ ನಿರ್ಮಿಸುತ್ತಿರುವ ಲೈಕಾ ಪ್ರೊಡಕ್ಷನ್ಸ್ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಇದನ್ನು ಖಚಿತಪಡಿಸಿದೆ. ಈ ಮೂಲಕ 32 ವರ್ಷಗಳ ಬಳಿಕ ರಜನಿಕಾಂತ್ ಹಾಗೂ ಅಮಿತಾಬ್ ಬಚ್ಚನ್ ಹಿರಿತೆರೆಯಲ್ಲಿ ಮತ್ತೆ ಒಟ್ಟಿಗೆ ಅಭಿನಯಿಸುತ್ತಿದ್ದಾರೆ.

ಈ ಇಬ್ಬರು ಮಹಾನ್ ಕಲಾವಿದರು ಒಟ್ಟಿಗೆ ನಟಿಸುತ್ತಿರುವುದು ಉಭಯ ನಟರುಗಳ ಅಭಿಮಾನಿಗಳಿಗೆ ಭಾರಿ ಸಂತಸ ತಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಇದನ್ನು ವ್ಯಕ್ತಪಡಿಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು