News Kannada
Friday, December 09 2022

ಬಾಲಿವುಡ್

ಅಮಿತಾಭ್‌ ಬಚ್ಚನ್‌ ಮನೆಯಲ್ಲಿ ಹುಸಿ ಬಾಂಬ್‌ ಕರೆ: ಪೊಲೀಸರಿಂದ ಇಬ್ಬರ ಬಂಧನ

Photo Credit :

ಮುಂಬೈ: ಬಾಲಿವುಡ್‌ನ ಖ್ಯಾತ ನಟ ಅಮಿತಾಭ್‌ ಬಚ್ಚನ್‌ ಅವರ ನಿವಾಸದಲ್ಲಿ ಹಾಗೂ ಮೂರು ರೈಲ್ವೆ ನಿಲ್ದಾಣಗಳು ಬಾಂಬ್‌ ಇಟ್ಟಿರುವುದಾಗಿ ಹುಸಿ ಕರೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಶುಕ್ರವಾರ ರಾತ್ರಿ ಮುಂಬೈ ಪೊಲೀಸ್‌ನ ಮುಖ್ಯ ನಿಯಂತ್ರಣ ಕೊಠಡಿಗೆ ಅನಾಮಧೇಯ ಕರೆಯೊಂದು ಬಂದಿತ್ತು. ಕರೆ ಮಾಡಿದ್ದ ವ್ಯಕ್ತಿ, ‘ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (ಸಿಎಸ್‌ಎಂಟಿ), ಬೈಕುಲ್ಲಾ, ದಾದರ್ ರೈಲ್ವೆ ನಿಲ್ದಾಣಗಳು ಮತ್ತು ಜುಹುದಲ್ಲಿನ ಮೆಗಾಸ್ಟಾರ್ ಅಮಿತಾಭ್‌ ಬಚ್ಚನ್ ಅವರ ಬಂಗಲೆಯಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಹೇಳಿದ್ದ‘ ಎಂಬುದಾಗಿ ಪೊಲೀಸರು ಮಾಹಿತಿ ನೀಡಿದರು.

ಪೊಲೀಸರು ಕರೆ ಮಾಡಿದವರ ಮೊಬೈಲ್ ಸಂಖ್ಯೆಯನ್ನು ಟ್ರ್ಯಾಕ್ ಮಾಡಿದಾಗ, ಕರೆ ಮಾಡಿದ ವ್ಯಕ್ತಿ ಠಾಣೆ ಜಿಲ್ಲೆಯ ಮುಂಬ್ರಾ ಬಳಿಯ ಶಿಲ್ ಫಟಾ ಪ್ರದೇಶದಲ್ಲಿದ್ದಾನೆ ಎಂದು ಗೊತ್ತಾಯಿತು. ಕೊನೆಗೂ ಹುಸಿ ಕರೆ ಮಾಡಿದ ವ್ಯಕ್ತಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾದರು.

See also  ಒಂದೇ ವಾರದಲ್ಲಿ 100 ಕೋಟಿಗೂ ಹೆಚ್ಚಿನ ಕಲೆಕ್ಷನ್‌ ಮಾಡಿದ ಗಂಗೂಬಾಯಿ ಕಥಿಯಾವಾಡಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು