News Kannada
Wednesday, November 30 2022

ಬಾಲಿವುಡ್

ಡ್ರಗ್ಸ್ ಪ್ರಕರಣ: ವಿಚಾರಣೆಗೆ ಹಾಜರಾಗದ ನಟಿ ಅನನ್ಯಾ ಪಾಂಡೆ - 1 min read

Photo Credit :

ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ಆರ್ಯನ್ ಖಾನ್ ಜೊತೆ ವಾಟ್ಸ್​ಆ್ಯಪ್​ ಸಂದೇಶ ಮಾಡಿದ ಆರೋಪದ ಮೇಲೆ ಬಾಲಿವುಡ್ ನಟಿ ಅನನ್ಯಾ ಪಾಂಡೆ ಸೋಮವಾರ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋಗೆ ಹಾಜರಾಗಬೇಕಿತ್ತು. ಆದರೆ, ಅವರು ವಿಚಾರಣೆಗೆ ಬಂದಿಲ್ಲ .

ಈ ಕುರಿತು ಮಾಹಿತಿ ನೀಡಿದ ಅಧಿಕಾರಿಗಳು, ಪಾಂಡೆಯವರನ್ನು ಕಳೆದ ವಾರ ಎರಡು ದಿನಗಳ ಕಾಲ ಎನ್‌ಸಿಬಿ ವಿಚಾರಣೆಗೆ ಒಳಪಡಿಸಿತ್ತು ಮತ್ತು ಸೋಮವಾರ ಮತ್ತೆ ಕರೆ ಮಾಡಲಾಗಿತ್ತು. ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಅವರು ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ, ಈ ಮೂರನೇ ಸುತ್ತಿನ ವಿಚಾರಣೆಗೆ ಹಾಜರಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಮುಂಬೈ ಕರಾವಳಿಯಲ್ಲಿನ ಕ್ರೂಸ್ ಹಡಗಿನಲ್ಲಿ ಡ್ರಗ್ಸ್​ ವಶಪಡಿಸಿಕೊಂಡ ಆರೋಪದ ಪ್ರಕರಣಕ್ಕೆ ಸಂಬಂಧಿಸಿದ ಆರ್ಯನ್ ಖಾನ್ ಜೊತೆಗಿನ ವಾಟ್ಸ್​ಆ್ಯಪ್​ ಚಾಟ್‌ಗಳಿಗೆ ಸಂಬಂಧಿಸಿದಂತೆ ಪಾಂಡೆಯನ್ನು ಸುಮಾರು ನಾಲ್ಕು ಗಂಟೆಗಳ ಕಾಲ ಶುಕ್ರವಾರ ವಿಚಾರಣೆ ನಡೆಸಲಾಗಿದೆ. ನಟಿಯನ್ನು ಗುರುವಾರ ಕೂಡ ಸುಮಾರು ಎರಡು ಗಂಟೆಗಳ ಕಾಲ ಪ್ರಶ್ನಿಸಲಾಗಿದೆ.

See also  ಮಾನನಷ್ಟ ಮೊಕದ್ದಮೆ: ನಟಿ ಕಂಗನಾ ಅರ್ಜಿ ಹೈಕೋರ್ಟ್‌ನಲ್ಲಿ ವಜಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು