ದೆಹಲಿ: ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದ ಪ್ರಶಸ್ತಿ ವಿಭಾಗದಲ್ಲಿ ಜ್ಯೂರಿಯಾಗಿದ್ದ ಇಸ್ರೇಲಿ ನಿರ್ದೇಶಕ ನದಾಲ್, ಭಾರತದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಕುರಿತು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದರು. ಇಂತಹ ಅಶ್ಲೀಲ, ಕೆಟ್ಟ ಸಿನಿಮಾವನ್ನು ನಾನು ಯಾವತ್ತೂ ಜ್ಯೂರಿಯಾಗಿ ನೋಡಿಲ್ಲ ಎಂದು ಕಾಮೆಂಟ್ ಮಾಡಿದ್ದರು.
ನದಾಲ್ ಮಾತಿಗೆ ಸಾಕಷ್ಟು ಪರ ವಿರೋಧ ಕೂಡ ವ್ಯಕ್ತವಾಗಿತ್ತು. ನಿನ್ನೆಯಷ್ಟೇ ಬಾಲಿವುಡ್ ನಟಿ ಸ್ವರ ಭಾಸ್ಕರ್ ಇಸ್ರೇಲಿ ನಿರ್ದೇಶಕನ ಪರವಾಗಿ ನಿಂತಿದ್ದಾರೆ. ಈ ಬೆನ್ನಲ್ಲೇ ಖ್ಯಾತ ನಟ ಪ್ರಕಾಶ್ ರಾಜ್ ಕೂಡ ನಿರ್ದೇಶಕನ ಪರವಾಗಿ ಬ್ಯಾಟ್ ಬೀಸಿದ್ದಾರೆ.
ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸ್ವರ ಭಾಸ್ಕರ್, ‘ಸತ್ಯ ಏನು ಅನ್ನುವುದು ಸ್ಪಷ್ಟವಾಗಿ ಜಗತ್ತಿಗೆ ಅರ್ಥವಾಗಿದೆ’ ಎಂದು ಬರೆದುಕೊಂಡಿದ್ದರು. ಸ್ವರ ಭಾಸ್ಕರ್ ಮಾತಿಗೂ ಕೆಲವರು ಆಕ್ಷೇಪ ವ್ಯಕ್ತ ಪಡಿಸಿದ್ದರೆ, ಇನ್ನೂ ಕೆಲವರು ಸ್ವರ ಪರವಾಗಿಯೇ ಮಾತನಾಡಿದ್ದರು. ಪ್ರಕಾಶ್ ರಾಜ್ ಕೂಡ ಕೊನೆಗೂ ಸತ್ಯ ಅಧಿಕೃತವಾಗಿದೆ ಎಂದು ಟ್ವಿಟ್ ಮಾಡಿದ್ದಾರೆ. ಈ ಮೂಲಕ ಇಸ್ರೇಲಿ ನಿರ್ದೇಶಕನ ಪರವಾಗಿ ಪ್ರಕಾಶ್ ರಾಜ್ ನಿಂತಿದ್ದಾರೆ.