News Kannada
Sunday, March 03 2024
ಮಂಗಳೂರು

ಸುಳ್ಯ: ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ನೆರವು ನೀಡಿದ ಬಾಲಿವುಡ್ ನಿರ್ಮಾಪಕ

Sullia: Bollywood producer helps Praveen Nettaru's family
Photo Credit : Wikimedia
 ಸುಳ್ಯ: ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾ ಮುಂದಾಳು ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಾಲಿವುಡ್ ನಿರ್ಮಾಪಕ, ಉದ್ಯಮಿ ಮನೀಶ್ ಮುಂದ್ರಾ ರೂ. 11 ಲಕ್ಷ ಮೊತ್ತದ ನೆರವು ನೀಡಿರುವುದಾಗಿ ತಿಳಿದುಬಂದಿದೆ.
ಪ್ರವೀಣ್ ಕುಟುಂಬದ ಬ್ಯಾಂಕ್ ಖಾತೆಯ ಮಾಹಿತಿಯನ್ನು ಪಡೆದುಕೊಂಡು ಬಳಿಕ ರೂ. 11 ಲಕ್ಷ ಮೊತ್ತವನ್ನು ಪ್ರವೀಣ್ ಪತ್ನಿ ನೂತನಾ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಿರುವುದಾಗಿ  ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ.
ಮನೀಶ್ ಮುಂದ್ರಾ ಹಲವಾರು ಬಾಲಿವುಡ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. 2017ರಲ್ಲಿ ಅವರ ನಿರ್ಮಾಣದ ‘ಧನಕ್’  ರಾಷ್ಟ್ರ ಪ್ರಶಸ್ತಿ ಗಳಿಸಿತ್ತು. ಅವರ ‘ನ್ಯೂಟನ್’ ಚಿತ್ರ ಆಸ್ಕರ್‍ ಪ್ರಶಸ್ತಿಗೆ ಪ್ರವೇಶ ಪಡೆದಿತ್ತು. ಅಸಹಾಯಕರಿಗೆ ನೆರವಾಗುವ  ಮುಂದ್ರಾ, ಕೊರೊನಾ ಸಂದರ್ಭದಲ್ಲಿ ಉಚಿತ ಪಿಪಿಇ ಕಿಟ್‌ಗಳನ್ನು ಒದಗಿಸಿದ್ದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು