News Kannada
Saturday, February 24 2024
ಕೋಸ್ಟಲ್ ವುಡ್

ಬಹುನಿರೀಕ್ಷಿತ “ಶಕಲಕ ಬೂಮ್ ಬೂಮ್” ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ

The much-awaited film "Shakalaka Boom Boom" will be released across the coastal district
Photo Credit : News Kannada

ಮಂಗಳೂರು: “ಯುಎನ್ ಸಿನೆಮಾಸ್ ಬ್ಯಾನರ್ ನಡಿ ನಿತ್ಯಾನಂದ ನಾಯಕ್ ನರಸಿಂಗೆ ನಿರ್ಮಿಸಿ, ಶ್ರೀಶ ನಾಯಕ್ ಎಳ್ಳಾರೆ ನಿರ್ದೇಶನದ ಶಕಲಕ ಬೂಮ್ ಬೂಮ್ ತುಳು ಚಲನ ಚಿತ್ರದ ಬಿಡುಗಡೆ ಸಮಾರಂಭ ನಗರದ ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ನಡೆಯಿತು.

ಈಗ ತುಳು ಚಿತ್ರಗಳಿಗೆ ಪರ್ವ ಕಾಲ. ಹೊಸ ಹೊಸ ತುಳು ಸಿನಿಮಾಗಳು ಬಿಡುಗಡೆಯಾಗುತ್ತಿರುವುದು ಸಂತಸದ ವಿಚಾರ. ತುಳುವರು ಸಿನಿಮಾ ನೋಡಿ ಪ್ರೋತ್ಸಾಹ ಕೊಡಬೇಕು ಎಂದು ಖ್ಯಾತ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಸಿನಿಮಾ ಬಿಡುಗಡೆಗೊಳಿಸಿ ಮಾತನಾಡಿದರು. ಬಳಿಕ ಮಾತನಾಡಿದ ಪ್ರಕಾಶ್ ಪಾಂಡೇಶ್ವರ್ ಅವರು ಮಾತನಾಡಿ ಶಕಲಕ ಬೂಂ ಬೂಂ ಚಿತ್ರದ ಟೈಟಲ್ ವಿಭಿನ್ನವಾಗಿದ್ದು, ಸಿನಿಮಾ ಮಂದಿರಕ್ಕೆ ಜನರನ್ನು ಸೆಳೆಯುವದರಲ್ಲಿ ಸಂಶಯವಿಲ್ಲ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸ ಬೇಕೆಂದರು.

ಸಿನಿಮಾ ನಿರ್ಮಾಪಕ ನಿತ್ಯಾನಂದ ನರಸಿಂಗೆ, ನಿರ್ದೇಶಕ ಶ್ರೀಶ ನಾಯಕ್ ಎಳ್ಳಾರೆ, ಚೈತ್ರ ಶೆಟ್ಟಿ, ಮಿಮಿಕ್ರಿ ಶರಣ್, ತ್ರಿಶೂಲ್ ಶೆಟ್ಟಿ, ಲಕ್ಷ್ಯ ಶೆಟ್ಟಿ, ಸಂಗೀತ ನಿರ್ದೇಶಕ ಡಾಲ್ವಿನ್ ಕೊಳಲಗಿರಿ ಉಪಸ್ಥಿತರಿದ್ದರು. ಯತೀಶ್ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.

ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಬಿಗ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಉಡುಪಿಯಲ್ಲಿ ಕಲ್ಪನ, ಮೂಡಬಿದ್ರೆಯಲ್ಲಿ ಅಮರಶ್ರೀ, ಬೆಳ್ತಂಗಡಿಯಲ್ಲಿ ಭಾರತ್, ಕಾರ್ಕಳದಲ್ಲಿ ರಾಧಿಕ, ಪ್ಲಾನೆಟ್, ಸುರತ್ಕಲ್ ನಲ್ಲಿ ನಟರಾಜ್, ಸಿನಿ ಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಭಾರತ್ ಸಿನಿಮಾಸ್, ಐನಾಕ್ಸ್, ಪುತ್ತೂರಿನಲ್ಲಿ ಅರುಣ, ಭಾರತ್ ಸಿನಿಮಾಸ್, ಸುಳ್ಯದಲ್ಲಿ ಸಂತೋಷ್ ಮೊದಲಾದ ಚಿತ್ರಮಂದಿರಗಳಲ್ಲಿ ಶಕಲಕ ಬೂಂ ಬೂಂ ತೆರೆಕಂಡಿದೆ.”ಕಾಮಿಡಿ, ಹಾರರ್ ವಿಭಿನ್ನ ಕಥಾಹಂದರದ ಚಲನಚಿತ್ರವನ್ನು ಶ್ರೀಶ ನಾಯಕ್ ಎಳ್ಳಾರೆ ನಿರ್ದೇಶನಮಾಡಿದ್ದಾರೆ.

ಚಿತ್ರಕ್ಕೆ ನಿತ್ಯಾನಂದ ನಾಯಕ್ ನರಸಿಂಗೆ, ಉಮೇಶ್ ಪ್ರಭು ಮಾಣಿಬೆಟ್ಟು ನಿರ್ಮಾಪಕರಾಗಿದ್ದಾರೆ. ಡಾಲ್ವಿನ್ ಕೊಳಲಗಿರಿ ಚಿತ್ರದ ಸಂಗೀತ ನಿರ್ದೇಶಕರಾಗಿದ್ದರೆ.ತುಳುನಾಡಿನ ಖ್ಯಾತ ಛಾಯಾಗ್ರಾಹಕರಾದ ಪ್ರಜ್ವಲ್ ಸುವರ್ಣ ಹಾಗೂ ಅರುಣ್ ರೈ ಪುತ್ತೂರು ಕ್ಯಾಮರಾ ಕೈಚಳಕವಿದೆ.

ಚಿತ್ರದ ಪ್ರಮುಖ ಭೂಮಿಕೆಯಲ್ಲಿ ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್, ಉಮೇಶ್ ಮಿಜಾರ್, ಪ್ರವೀಣ್ ಮರ್ಕಮೆ, ಮಿಮಿಕ್ರಿ ಶರಣ್, ಕಥಾನಾಯಕನಾಗಿ ಗೊಡ್ವಿನ್ಸ್ಪಾರ್ಕಲ್ ಹಾಗೂ ಕಥಾನಾಯಕಿಯಾಗಿ ಲಕ್ಷಾ ಶೆಟ್ಟಿ, ರೂಪಶ್ರೀ ವರ್ಕಾಡಿ, ಮನೋಹರ್ ಶೆಟ್ಟಿನಂದಳಿಕೆ, ವಸಂತ್ ಮುನಿಯಾಲ್, ಹರೀಶ್ ಗಾಳಿಪಟ, ಸುನಿಲ್ ಕಡ್ತಲ, ಯತೀಶ್ ಪೂಜಾರಿ,ಯಶವಂತ್, ಪ್ರವೀಣ್ ಆಚಾರ್ಯ, ಕಾಮಿಡಿ ಕಿಲಾಡಿ ಖ್ಯಾತಿಯ ರಾಧೇಶ್, ಕಾಮಿಡಿ ಗ್ಯಾಂಗ್ ಖ್ಯಾತಿಯ ರಾಜೇಶ್ ದಾನಶಾಲೆ, ಲಂಚುಲಾಲ್, ರಾಜೇಶ್ವರಿ ಕುಲಾಲ್, ಧೀರಜ್, ಶಿವಾನಂದ, ಯಜ್ಞೆಶ್ ಶೆಟ್ಟಿ ಅಭಿನಯಿಸಿದ್ದಾರೆ.

ತುಳು ಸಿನೆಮಾದಲ್ಲಿ ವೈವಿಧ್ಯತೆ ಇರಬೇಕು ಎಂಬ ನೆಲೆಯಲ್ಲಿ ಕಾಮಿಡಿ, ಹಾರರ್, ಥ್ರಿಲ್ಲರ್,ಸಸ್ಪೆನ್ಸ್ ನ್ನು ಹೊಂದಿರುವ ಹೊಸತನದ ಚಿತ್ರ ಶಕಲಕ ಬೂಮ್ ಬೂಮ್ ಆಗಿದೆ.ಜನರನ್ನು ಮೋಸ ಮಾಡುತ್ತ ಬದುಕುವವರು, ಸಂಪತ್ತಿನ ಆಸೆಯಿಂದ ಬಂದು ಪಾಳುಬಿದ್ದ ಮನೆಯಲ್ಲಿ ಬಂಧಿಯಾಗುತ್ತಾರೆ. ಆ ಮನೆಯ ರಹಸ್ಯ ಏನು? ಈ ಹಿಂದೆ ಆ ಮನೆಯಲ್ಲಿಏನಾಗಿತ್ತು? ನ್ಯಾಯ ಗೆಲ್ಲುತ್ತದಾ? ಸತ್ಯಕ್ಕೆ ಜಯವಿದೆಯಾ? ಎನ್ನುವ ವಿಶಿಷ್ಟವಾದ ಕಥಾಹಂದರಹೊಂದಿರುವ ವಿಭಿನ್ನವಾದ ಚಿತ್ರ ಇದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು