ಹೈದರಾಬಾದ್: ವಿಮರ್ಶಕರ ಮೆಚ್ಚುಗೆ ಪಡೆದ ‘ಮೇಜರ್’ ಚಿತ್ರದ ಮೊದಲ ವಾರ್ಷಿಕೋತ್ಸವ ಸಮೀಪಿಸುತ್ತಿದ್ದಂತೆ ಚಿತ್ರದ ನಟ ಅದಿವಿ ಶೇಶ್ ಅವರು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದರು.
ಮಾಜಿ ರಾಷ್ಟ್ರಪತಿಗಳೊಂದಿಗೆ ಚಲನಚಿತ್ರ ಕುರಿತು ಮಾಹಿತಿ ಹಂಚಿಕೊಂಡಿರುವುದಾಗಿ ಇನ್ಸ್ಟಾದಲ್ಲಿ ಬರೆದುಕೊಂಡಿದ್ದಾರೆ. ಮಾಜಿ ರಾಷ್ಟ್ರಪತಿ ಕೋವಿಂದ್ ಸಿನಿಮಾ ತಂಡದ ಶ್ರಮವನ್ನು ಶ್ಲಾಘಿಸಿದರು. ಮೇಜರ್ ಚಿತ್ರದ ಕುರಿತು ಮಾಜಿ ರಾಷ್ಟ್ರಪತಿ ಕೋವಿಂದ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಅವರೊಂದಿಗಿನ ಭೇಟಿ ಅವಿಸ್ಮರಣೀಯ ಎಂದು ಅವರು ಬರೆದುಕೊಂಡಿದ್ದಾರೆ. ಮೇಜರ್ ಚಿತ್ರಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದ್ದನ್ನು ನಾವು ಗಮನಿಸಬಹುದಾಗಿದೆ. ಚಿತ್ರದಲ್ಲಿ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಪಾತ್ರದಲ್ಲಿ ಅದಿವಿ ಕಾಣಿಸಿಕೊಂಡಿದ್ದರು. ಪ್ರಸ್ತುತ ಅವರು ಗೂಡಾಚಾರಿ 2 ಚಿತ್ರದಲ್ಲಿ ತೊಡಗಿಸಿಕೊಂಡಿದ್ದಾರೆ.