ಕೊಟ್ಟಾಯಂ: `ಕೊಟ್ಟಾಯಂ ಪ್ರದೀಪ್’ ಎಂಬ ಹೆಸರಿನಿಂದ ಹೆಚ್ಚು ಜನಪ್ರಿಯರಾಗಿದ್ದ ಮಲಯಾಳಂ ನಟ ಪ್ರದೀಪ್ ಕೆಆರ್(61) ಅವರು ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಪ್ರದೀಪ್‌ರನ್ನು ಕೊಟ್ಟಾಯಂನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
2001 ರಲ್ಲಿ ತಮ್ಮ 40 ನೇ ವಯಸ್ಸಿನಲ್ಲಿ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದ ಪ್ರದೀಪ್, ಹೆಚ್ಚಾಗಿ ಹಾಸ್ಯ ಪಾತ್ರಗಳನ್ನು ನಿರ್ವಹಿಸಿದ್ದರು ಹಾಗೂ 70ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು.
ಪ್ರದೀಪ್ ತನ್ನ ಪತ್ನಿ ಮಾಯಾ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.