ಮುಂಬೈ: ‘ಧೂಮ್’ ಮತ್ತು ‘ಧೂಮ್ 2’ ನಂತಹ ಯಶಸ್ವಿ ಚಿತ್ರಗಳೊಂದಿಗೆ ಪ್ರೇಕ್ಷಕರ ಹೃದಯವನ್ನು ಗೆದ್ದ ಬಾಲಿವುಡ್ ಸಿನಿಮಾ ನಿರ್ದೇಶಕ ನಿರ್ದೇಶಕ ಸಂಜಯ್ ಗಾಧ್ವಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬೆಳಿಗ್ಗೆ ವಾಕಿಂಗ್ ಸಮಯದಲ್ಲಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಬಳಿಕ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು ಎಂದು ತಿಳಿದುಬಂದಿದೆ. 57 ವರ್ಷದ ಸಂಜಯ್ ಗಾಧ್ವಿ ಅವರ ಸಾವಿನಿಂದ ಎಲ್ಲರೂ ಆಘಾತಕ್ಕೊಳಗಾಗಿದ್ದು, ಕಲಾವಿದರು ಅವರಿಗೆ ಗೌರವ ಸಲ್ಲಿಸುತ್ತಿದ್ದಾರೆ.