News Kannada
Sunday, March 03 2024
ಮನರಂಜನೆ

‘ಕಂಗುವ’ ಗ್ಲಿಂಪ್ಸ್​ ಮೂಲಕ ಸೂರ್ಯ ಅವರಿಗೆ ಬರ್ತ್‍ಡೇ ವಿಶ್ ತಿಳಿಸಿದ ಚಿತ್ರತಂಡ

kanguva movie
Photo Credit : Twitter

ನಟ ಸೂರ್ಯ ಅವರಿಗೆ ಇಂದು (ಜುಲೈ 23) ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳು ಈ ದಿನವನ್ನು ಭರ್ಜರಿಯಾಗಿ ಸೆಲೆಬ್ರೇಟ್​ ಮಾಡುತ್ತಿದ್ದಾರೆ. ಅವರ ಸಂಭ್ರಮವನ್ನು ಹೆಚ್ಚಿಸುವ ರೀತಿಯಲ್ಲಿ ‘ಕಂಗುವ’ ಸಿನಿಮಾದ ಗ್ಲಿಂಪ್ಸ್​ ಬಿಡುಗಡೆ ಆಗಿದೆ. ಇದರಲ್ಲಿ ಸೂರ್ಯ ಅವರ ಪಾತ್ರ ಗಮನ ಸೆಳೆಯುತ್ತಿದೆ.

ಕಾಲಿವುಡ್​ನಲ್ಲಿ ಹಲವು ವರ್ಷಗಳಿಂದ ಗಮನಾರ್ಹ ಸಿನಿಮಾಗಳನ್ನು ನೀಡಿದ ಕೆ.ಇ. ಜ್ಞಾನವೇಲ್ ರಾಜ ಅವರು ಈಗ ‘ಕಂಗುವ’ ಚಿತ್ರವನ್ನು ನಿರ್ಮಿಸಿದ್ದಾರೆ. ಅವರ ‘ಸ್ಟುಡಿಯೋ ಗ್ರೀನ್’ ಸಂಸ್ಥೆ ಮೂಲಕ ಈ ಸಿನಿಮಾ ತಯಾರಾಗುತ್ತಿದೆ. ಶಿವ ಅವರು ನಿರ್ದೇಶನ ಮಾಡುತ್ತಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ‘ಕಂಗುವ’ ಸಿನಿಮಾ ಸಿದ್ಧವಾಗುತ್ತಿದೆ ಎಂಬುದು ವಿಶೇಷ. ದೇವಿ ಶ್ರೀ ಪ್ರಸಾದ್ ಸಂಗೀತ ನಿರ್ದೇಶನ, ವೆಟ್ರಿ ಪಳನಿಸ್ವಾಮಿ ಅವರ ಛಾಯಾಗ್ರಹಣದಲ್ಲಿ ಈ ಚಿತ್ರ ಮೂಡಿಬರುತ್ತಿದೆ.

ಏಕಕಾಲಕ್ಕೆ ಬರೋಬ್ಬರಿ 10 ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. 3ಡಿ ವರ್ಷನ್​ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ಈ ವಿಷಯ ಕೇಳಿ ಅಭಿಮಾನಿಗಳ ಥ್ರಿಲ್​ ಹೆಚ್ಚಿದೆ. ಸದ್ಯ ಸೋಶಿಯಲ್​ ಮೀಡಿಯಾದಲ್ಲಿ ‘ಕಂಗುವ’ ಗ್ಲಿಂಪ್ಸ್​ ವೈರಲ್​ ಆಗಿದೆ. ಈ ಸಿನಿಮಾದಲ್ಲಿ ದಿಶಾ ಪಟಾಣಿ ಅವರು ನಾಯಕಿಯಾಗಿ ನಟಿಸುವ ಮೂಲಕ ಕಾಲಿವುಡ್​ಗೆ ಎಂಟ್ರಿ ನೀಡುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು