ಹೈದರಾಬಾದ್: ಡ್ರಗ್ಸ್ ಪ್ರಕರಣದಲ್ಲಿನ ಅಕ್ರಮ ಹಣ ವರ್ಗಾವಣೆ ವಿಷಯಕ್ಕೆ ಸಂಬಂಧಿಸಿ ದಂತೆ ನಟಿ ರಕುಲ್ ಪ್ರೀತ್ ಸಿಂಗ್ ಶುಕ್ರವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು.
ನಾಲ್ಕು ವರ್ಷಗಳ ಹಿಂದಿನ ಈ ಪ್ರಕರಣದಲ್ಲಿ ಡ್ರಗ್ಸ್ ಸೇವನೆ, ಸರಬರಾಜು ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ನಟಿ ರಕುಲ್ ಪ್ರೀತ್ ಸಿಂಗ್ ಸೇರಿ ತೆಲುಗು ಚಿತ್ರೋದ್ಯಮದ ಹತ್ತು ಮಂದಿ ನಟ ನಟಿಯರಿಗೆ ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿತ್ತು.
ತೆಲಂಗಾಣ ಸರ್ಕಾರದ ಅಬ್ಕಾರಿ ಇಲಾಖೆ ನಿಷೇಧಿಸಿರುವ ಎಲ್‌ಎಸ್‌ಡಿ ಮತ್ತು ಎಂಡಿಎಂನಂತಹ ಅತ್ಯಾಧುನಿಕ ಮಾದಕ ದ್ರವ್ಯಗಳನ್ನು ಪೂರೈಸಿದ ವಿಚಾರಕ್ಕೆ ಸಂಬಂಧಿಸಿದಂತೆ ತೆಲುಗು ನಟ –ನಟಿಯರಿಗೆ ನೋಟಿಸ್ ಜಾರಿ ಮಾಡಲಾಗಿತ್ತು