NewsKarnataka
Sunday, September 26 2021

ತೆಲುಗು

ಸಮಂತಾ ನಾಗಚೈತನ್ಯ ದಂಪತಿಗಳ ವೈವಾಹಿಕ ಜೀವನದ ಬಗ್ಗೆ ಭಾರಿ ಚರ್ಚೆ

ಖ್ಯಾತ ನಟಿ ಸಮಂತಾ ಹಾಗೇ ನಾಗ‌ಚೈತನ್ಯ‌ ವೈವಾಹಿಕ‌ ಜೀವನದಲ್ಲಿ ಖ್ಯಾತ ನಟಿ ಸಮಂತಾ ಅವರ ವೈಯಕ್ತಿಕ ಜೀವನದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದರೂ ಆ ಬಗ್ಗೆ ಅವರು ಮೌನ ವಹಿಸಿದ್ದಾರೆ. ನಾಗ ಚೈತನ್ಯ ಜತೆ ಸಮಂತಾ ವಿಚ್ಛೇದನ ಪಡೆದುಕೊಳ್ಳುತ್ತಿದ್ದಾರೆ ಎನ್ನುವ ವದಂತಿ ಅಭಿಮಾನಿಗಳಿಗೆ ಶಾಕ್​ ನೀಡಿದೆ.ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ನಟನೆಯ ‘ಲವ್​ ಸ್ಟೋರಿ’ ಸಿನಿಮಾ ಟ್ರೇಲರ್​ ಇಂದು ಬಿಡುಗಡೆ​ ಆಗಿದ್ದು, ಇದಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಈ ಟ್ರೇಲರ್ ಪೋಸ್ಟ್​ ಮಾಡಿ, ಅದನ್ನು ವೀಕ್ಷಿಸುವಂತೆ ಅಭಿಮಾನಿಗಳ ಬಳಿ ಕೋರುತ್ತಿದ್ದಾರೆ. ಸಮಂತಾ ಕೂಡ ಈ ಬಗ್ಗೆ ಪೋಸ್ಟ್ ಮಾಡಿ ಎಲ್ಲಾ ವದಂತಿಗೆ ತೆರೆ ಎಳೆಯುತ್ತಾರೆ ಎಂದು ಅಭಿಮಾನಿಗಳು ಕಾದು ಕೂತಿದ್ದರು. ಆದರೆ ಈ ನಿರೀಕ್ಷೆ ಸುಳ್ಳಾಗಿದೆ.

ಇನ್ನು ಸಮಂತಾ ಇನ್​ಸ್ಟಾಗ್ರಾಮ್​ನಲ್ಲಿ ಬೇರೆ ಬೇರೆ ಸ್ಟೇಟಸ್​ಗಳನ್ನು ಹಾಕಿಕೊಳ್ಳುತ್ತಿದ್ದಾರೆ. ಆದರೆ, ಅವರು ಎಲ್ಲಿಯೂ ‘ಲವ್​ ಸ್ಟೋರಿ’ ಬಗ್ಗೆ ಉಲ್ಲೇಖ ಮಾಡಿ ಪೋಸ್ಟ್ ಮಾಡಿಲ್ಲ. ಇದು ಸಾಕಷ್ಟು ಅಚ್ಚರಿ ಮೂಡಿಸಿದ್ದು, ಇದು ವಿಚ್ಛೇದನ ವದಂತಿಗೆ ಸಾಕ್ಷ್ಯ ಒದಗಿಸಿದಂತಾಗಿದೆ.

ಗಂಡ ಎಂದ ಮಾತ್ರಕ್ಕೆ ಈ ಬಗ್ಗೆ ಪೋಸ್ಟ್​ ಮಾಡಲೇಬೇಕೆಂದೇನೂ ಇಲ್ಲ ಎಂದು ಸಮಂತಾ ಪರ ಕೆಲವರು ವಕಾಲತ್ತು ವಹಿಸಿಕೊಂಡು ಬಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!