News Kannada
Sunday, February 05 2023

ತೆಲುಗು

ಮೊದಲಬಾರಿಗೆ ತಮ್ಮ ಮುದ್ದಾದ ಮಗುವಿನ ಫೋಟೋ ಹಂಚಿಕೊಂಡ ನಟಿ ಕಾಜಲ್ ಅಗರ್ವಾಲ್

Photo Credit :

ತೆಲುಗು: ಪ್ರಖ್ಯಾತ ನಟಿ ಕಾಜಲ್ ಅಗರ್ವಾಲ್ ಮೊದಲಬಾರಿಗೆ ತಮ್ಮ ಮುದ್ದಾದ ಮಗುವಿನ ಫೋಟೋ ಹಂಚಿಕೊಂಡಿದ್ದಾರೆ.
ವರ್ಷದ ಹಿಂದೆ ಉದ್ಯಮಿ ಗೌತಮ್ ಕಿಚ್ಲು ಅವರನ್ನು ವಿವಾಹವಾಗಿರುವ ಕಾಜಲ್‌ ಅಗರ್ವಾಲ್‌ ಏಪ್ರಿಲ್ 19 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು.

ಇನ್ಸ್ಟಾಗ್ರಾಮ್‌ ನಲ್ಲಿ ಫೋಟೋ ಹಂಚಿಕೊಳ್ಳುವುದರ ಜೊತೆ ಭಾವನಾತ್ಮಕ ಪತ್ರವನ್ನು ಬರೆದಿದ್ದಾರೆ. ನೀನು ಯಾವಾಗಲೂ ನನ್ನ ಜೊತೆಯೇ ಇರಬೇಕೆಂದು ನಾನು ಬಯಸುತ್ತೇನೆ. ನಿನ್ನನ್ನು ನನ್ನ ತೋಳುಗಳಲ್ಲಿ ಹಿಡಿದಿಟ್ಟುಕೊಂಡ ಕ್ಷಣ, ನಿನ್ನ ಪುಟ್ಟ ಕೈಯನ್ನು ನನ್ನ ಕೈಯಲ್ಲಿ ಹಿಡಿದು, ನಿನ್ನ ಬೆಚ್ಚಗಿನ ಉಸಿರನ್ನು ಅನುಭವಿಸಿದ, ಆ ನಿನ್ನ ಸುಂದರ ಕಣ್ಣುಗಳನ್ನು ನೋಡಿದ ಕ್ಷಣಗಳನ್ನು ಮರೆಯಲಾರೆ. ತಾಯ್ತನದ ಖುಷಿಯನ್ನು ಪದಗಳಲ್ಲಿ ಬಣ್ಣಿಸಲು ಸಾಧ್ಯವಿಲ್ಲ, ನೀನೇ ನನಗೆ ಎಲ್ಲಾ ಎಂದು ಬರೆದುಕೊಂಡಿದ್ದಾರೆ.

ಕಳೆದ ಕೆಲದಿನಗಳಿಂದ ಚಿತ್ರರಂಗದಿಂದ ವಿರಾಮ ಪಡೆದಿದ್ದ ಕಾಜಲ್‌ ತಮಿಳು ನಿರ್ದೇಶಕ ಎಸ್‌ ಶಂಕರ್‌ ನಿರ್ದೇಶನದ ಇಂಡಿಯನ್‌ 2 ಚಿತ್ರದಲ್ಲಿ ಕಮಲ್‌ ಹಸನ್‌ ಗೆ ನಾಯಕಿಯಾಗಿ ಚಿತ್ರರಂಗಕ್ಕೆ ಕಂಬ್ಯಾಕ್‌ ಮಾಡುತ್ತಿದ್ದಾರೆ.

 

See also  'ಸತ್ಯರಾಜ್'ಗೆ ಕೊರೋನಾ ಪಾಸಿಟಿವ್: ಆಸ್ಪತ್ರೆಗೆ ದಾಖಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು