News Kannada
Thursday, October 06 2022

ತೆಲುಗು

ಜುಲೈ 4 ರಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವೇದಿಕೆ ಹಂಚಿಕೊಳ್ಳಲಿರುವ ಮೆಗಾಸ್ಟಾರ್‌ ಚಿರಂಜೀವಿ! - 1 min read

Megastar Chiranjeevi to share stage with PM Narendra Modi on July 4!
Photo Credit : Twitter

ಭೀಮಾವರಂ: ‘ಆಜಾದಿ ಕಾ ಅಮೃತ್ ಮಹೋತ್ಸವ’ದ ಅಂಗವಾಗಿ ಕೇಂದ್ರ ಸರ್ಕಾರ ಕ್ರಾಂತಿ ವೀರ ಅಲ್ಲೂರಿ ಸೀತಾರಾಮರಾಜರ 125ನೇ ಜಯಂತಿ ಆಚರಿಸಲು ಸಿದ್ಧತೆ ನಡೆಸಿದೆ. ಇದರ ಅಂಗವಾಗಿ ಭೀಮಾವರಂನಲ್ಲಿ ಜುಲೈ4 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಹಕಾರ ನೀಡುವಂತೆ ನಟ ಚಿರಂಜೀವಿ ಅವರಿಗೆ ಕೇಂದ್ರ ಸರ್ಕಾರ ಆಹ್ವಾನ ನೀಡಿದೆ. ಈ ಸಂಬಂಧ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಚಿರಂಜೀವಿ ಅವರಿಗೆ ಪತ್ರ ಬರೆದಿದ್ದಾರೆ.

ಈ ಪತ್ರದಲ್ಲಿ  ”ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಭೀಮಾವರಂನಲ್ಲಿ ಅಲ್ಲೂರಿ ಸೀತಾರಾಮರಾಜರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿಯವರ ಕೈಯಿಂದ ಅನಾವರಣಗೊಳಿಸಲಿದ್ದೇವೆ. ಈ ಕಾರ್ಯಕ್ರಮದಲ್ಲಿ ನೀವು ಭಾಗವಹಿಸಬೇಕು.  ಕೇಂದ್ರ ಸಂಸ್ಕೃತಿ ಸಚಿವಾಲಯವು ಆಂಧ್ರಪ್ರದೇಶ ಸರ್ಕಾರದ ಸಹಯೋಗದೊಂದಿಗೆ ವರ್ಷವಿಡೀ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇವೆಲ್ಲವುಗಳಲ್ಲಿ ನಿಮ್ಮ ಸಹಕಾರವನ್ನು ನಾವು ಬಯಸುತ್ತೇವೆ, ಎಂದು ಕಿಶನ್ ರೆಡ್ಡಿ ಚಿರಂಜೀವಿ ಅವರನ್ನು ಆಹ್ವಾನಿಸಿದರು.

ಮನವಿ ಮೇರೆಗೆ ಜುಲೈ 4 ರಂದು ಭೀಮಾವರಂನಲ್ಲಿ ನಡೆಯಲಿರುವ ಅಲ್ಲೂರಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಚಿರಂಜೀವಿ ವೇದಿಕೆ ಹಂಚಿಕೊಳ್ಳಲಿದ್ದಾರೆ.

See also  ಬಸವ ಹಾಗೂ ಡಾ.ಬಿ‌.ಆರ್.ಅಂಬೇಡ್ಕರ್ ವಸತಿ ಯೋಜನೆಯ 2060 ಫಲಾನುಭವಿಗಳಿಗೆ ಸವಲತ್ತು ವಿತರಣಾ ಸಮಾರಂಭ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು