News Kannada
Sunday, March 03 2024
ಕ್ರೈಮ್

ಸೇತುವೆ ಮೇಲೆ ಕೆಟ್ಟು ನಿಂತಿದ್ದ ಬಸ್​ಗೆ ಲಾರಿ ಡಿಕ್ಕಿ: 11 ಮಂದಿ ಸಾವು

11 killed as truck collides with bus on bridge
Photo Credit : IANS

ರಾಜಸ್ಥಾನ: ಭರತ್ಪುರ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹಂತ್ರಾ ಬಳಿಯ ಜೈಪುರ-ಆಗ್ರಾ ಹೆದ್ದಾರಿಯಲ್ಲಿ ಟ್ರೈಲರ್ ವಾಹನ ಬಸ್​ಗೆ ಡಿಕ್ಕಿಯಾಗಿ 11 ಜನರು ಸಾವನ್ನಪ್ಪಿದ್ದಾರೆ ಇತರೆ 12 ಮಂದಿ ಗಾಯಗೊಂಡಿದ್ದಾರೆ.

ಬಸ್ ರಾಜಸ್ಥಾನದ ಪುಷ್ಕರ್ನಿಂದ ಉತ್ತರ ಪ್ರದೇಶದ ವೃಂದಾವನಕ್ಕೆ ತೆರಳುತ್ತಿದ್ದಾಗ ಮುಂಜಾನೆ 4.30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೇತುವೆ ಮೇಲೆ ಬಸ್ ಕೆಟ್ಟು ನಿಂತಿದ್ದರಿಂದ ಈ ಘಟನೆ ನಡೆದಿದೆ.

ಬಸ್ ಚಾಲಕ ಮತ್ತು ಕೆಲವು ಪ್ರಯಾಣಿಕರು ಬಸ್ ಹಿಂದೆ ನಿಂತಿದ್ದಾಗ ವೇಗವಾಗಿ ಬಂದ ಟ್ರಕ್ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಬದುಕುಳಿದವರು ಹೇಳಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 5 / 5. Vote count: 2

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು