News Kannada
Saturday, March 02 2024
ಕ್ರೈಮ್

ಆಳವಾದ ಕಣಿವೆಗೆ ಬಿದ್ದ ಪಿಕ್‌ಅಪ್: 8 ಮಂದಿ ಸಾವು

8 killed as pick-up falls into deep gorge
Photo Credit : News Kannada

ಉತ್ತರಾಖಂಡ: ನೈನಿತಾಲ್ ಜಿಲ್ಲೆಯ ಒಖಲ್ಕಂಡಾದ ಛೀರಕನ್-ರೀತಾಸಾಹಿಬ್ ಮೋಟಾರು ರಸ್ತೆಯಲ್ಲಿ ಪಿಕ್ ಅಪ್ ವಾಹನವು ಆಳವಾದ ಕಣಿವೆಗೆ ಉರುಳಿದ ಪರಿಣಾಮ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ.

ನೈನಿತಾಲ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಹ್ಲಾದ್ ನಾರಾಯಣ್ ಮೀನಾ ಅವರ ಪ್ರಕಾರ, ವಾಹನವು ಪಟ್ಲೋಟ್’ನಿಂದ ಅಮ್ಜದ್ ಗ್ರಾಮಕ್ಕೆ ತೆರಳುತ್ತಿದ್ದಾಗ ಬೆಳಿಗ್ಗೆ 8 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.

ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮೋಟಾರ್ ಸೈಕಲ್ ತಪ್ಪಿಸಲು ಪ್ರಯತ್ನಿಸುವಾಗ ವಾಹನವು ಕಣಿವೆಗೆ ಬಿದ್ದಿದೆ ಎಂದು ಅವರು ತಿಳಿಸಿದ್ದಾರೆ. ಇನ್ನು ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಎಸ್‌ಎಸ್ಪಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು