News Kannada
Saturday, March 02 2024
ಕ್ರೈಮ್

ವಿದ್ಯಾರ್ಥಿನಿಯರಿಗೆ ಅಮಲು ಬರಿಸುವ ಔಷಧ ನೀಡಿ ದೌರ್ಜನ್ಯ: ಮಹಿಳೆ ಸೇರಿ ಮೂವರು ಸೆರೆ

Abuse of female students by giving intoxicating drugs: Three arrested, including a woman
Photo Credit : News Kannada

ಚಿಕ್ಕಮಗಳೂರು: ಇತ್ತೀಚೆಗೆ ಶಿಕ್ಷಕರೇ ವಿದ್ಯಾರ್ಥಿಗಳನ್ನು ಲೈಂಗಿಕವಾಗಿ ಶೋಷಣೆ ಮಾಡುವ ಪ್ರಕರಣಗಳು ಹೆಚ್ಚುತ್ತಿವೆ. ಅದೇ ರೀತಿ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ವಸತಿ ಶಾಲೆಯೊಂದರಲ್ಲಿ ಸರ್ಕಾರಿ ಅಧಿಕಾರಿಯಿಂದಲೇ ಅಮಾಯಕ ಹೆಣ್ಣು ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಕ್ರೂರ ಕೃತ್ಯ ನಡೆದಿದೆ. ಘಟನೆ ಸಂಬಂಧ ಮೂವರನ್ನ ಪೊಲೀಸರು ಬಂಧಿಸಿದ್ದಾರೆ. ವಸತಿ ಶಾಲೆಯ ಡಿ. ದರ್ಜೆ ನೌಕರ ಸುರೇಶ್, ಶೂಶ್ರುಕಿ ಚಂದನ, ವಿನಯ್ ಬಂಧಿತ ಆರೋಪಿಗಳು. ವಿನಯ್ ಎಂಬಾತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ನರ್ಸ್ ಪ್ರಿಯಕರನಾಗಿದ್ದಾನೆ. ಆರೋಪಿಗಳು ವಸತಿ ಶಾಲೆಯ ಹಲವು ಮಕ್ಕಳನ್ನ ಬಳಸಿಕೊಂಡಿರುವ ಆರೋಪ‌ ಕೇಳಿ ಬಂದಿದೆ.

ಈ ಆರೋಪಿಗಳು ವಿದ್ಯಾರ್ಥಿನಿಯರಿಗೆ ಅಮಲು ಬರೆಸುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ತಿಂಗಳುಗಳಿಂದ ಈ ಕೃತ್ಯ ನಡೆಯುತ್ತಿತ್ತು ಎಂದು ಪೊಲೀಸರ ತನಿಖೆಯಿಂದ ಬಯಲಾಗಿದೆ. ವಸತಿ ಶಾಲೆಯ ಡಿ. ದರ್ಜೆ ನೌಕರ ಸುರೇಶ್ ಎಂಬಾತ ಮೊದಲಿಗೆ ಪ್ಯಾರಾ ಮೆಡಿಕಲ್ ಕೋರ್ಸ್‌ ಕೊಡಿಸುತ್ತೇನೆ ಎಂದು ವಿದ್ಯಾರ್ಥಿನಿಯರನ್ನು ಪುಸಲಾಯಿಸುತ್ತಿದ್ದ. ಪರೀಕ್ಷೆಯಲ್ಲಿ ಪಾಸಾದರೆ ಕೆಲಸ ಸಿಗುತ್ತದೆ ಎಂದು ನಂಬಿಸುತ್ತಿದ್ದ. ಇದಕ್ಕೆ ಒಪ್ಪಿದ ಮಕ್ಕಳ ಪೋಷಕರನ್ನು ನಂಬಿಸಿ ವಿದ್ಯಾರ್ಥಿನಿಯರನ್ನು ಚಂದನಾ ಬಳಿ ಕಳಿಸುತ್ತಿದ್ದ. ಚಂದನಾ ಆರೋಗ್ಯ ಕೇಂದ್ರಕ್ಕೆ ಬರುವ ವಿದ್ಯಾರ್ಥಿನಿಯರನ್ನು ಅಲ್ಲೇ ಉಳಿಸಿಕೊಳ್ಳುತ್ತಿದ್ದಳು. ಕಾಫಿ- ಟೀಯಲ್ಲಿ ಮತ್ತು ಬರುವ ಔಷಧಿ ಬೆರೆಸಿ ವಿದ್ಯಾರ್ಥಿನಿಯರಿಗೆ ನೀಡುತ್ತಿದ್ದಳು. ಅರೆಪ್ರಜ್ಞಾವಸ್ಥೆಯಲ್ಲಿರುತ್ತಿದ್ದ ಮಕ್ಕಳ ಮೇಲೆ ಚಂದನಾ ಲವರ್ ವಿನಯ್ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂದು ಪೊಲೀಸರ ತನಿಖೆ ವೇಳೆ ತಿಳಿದುಬಂದಿದೆ. ಮೂವರು ಆರೋಪಿಗಳ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು