News Kannada
Sunday, March 03 2024
ಕ್ರೈಮ್

ಜಲ್ಲಿ ಸಾಗಾಟ ಲಾರಿ ಅರ್ಭಟಕ್ಕೆ ಬೈಕ್‌ ಸವಾರ ಬಲಿ

Bike rider killed in gravel hauling lorry collision
Photo Credit : News Kannada

ಬಂಟ್ವಾಳ : ಜಲ್ಲಿಕಲ್ಲು ಸಾಗಿಸುವ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಪಾಣೆಮಂಗಳೂರು ನೂತನ ಸೇತುವೆಯಲ್ಲಿ ನಡೆದಿದೆ. ಸಜೀಪ ಬೇಂಕ್ಯ ನಿವಾಸಿ ವಾಸುದೇವ ಮಯ್ಯ ಅವರ ಹಿರಿಯ ಮಗ ರಾಜ್ ಕುಮಾರ್ ಅವರು ಮೃತಪಟ್ಟ ದುರ್ದೈವಿ. ರಾಜ್ ಕುಮಾರ್ ಅವರು ವಾಮದಪದವು ಎಂಬಲ್ಲಿ ಜಾಗ ಖರೀದಿ ಮಾಡಿದ್ದು,ಕೃಷಿ ಮಾಡಿಕೊಂಡಿದ್ದರು.
ವಾಮದಪದವಿನ ಮನೆಯಿಂದ ಸಜೀಪ ಮೂಲ ಮನೆಗೆ ಬರುವ ವೇಳೆ ಎದುರಿನಿಂದ ಬಂದ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು