News Kannada
Friday, February 23 2024
ಕ್ರೈಮ್

ಎರಡು ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: 20ಕ್ಕೂ ಹೆಚ್ಚು ಜನರಿಗೆ ಗಾಯ

Over 20 injured as two state-run buses collide
Photo Credit : News Kannada

ಚಿಕ್ಕಮಗಳೂರು: ಎರಡು ಸರ್ಕಾರಿ ಬಸ್ಸುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಬಳಿ ನಡೆದಿದೆ.

ಈ ಘಟನೆಯಲ್ಲಿ ಎರಡೂ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ.  ಬಸ್ಸುಗಳ ಅಪಘಾತಕ್ಕೆ ಎರಡೂ ಬಸ್ಸಿನ ಚಾಲಕರ ಬೇಜವಾಬ್ದಾರಿ ಹಾಗೂ ಅತಿ ವೇಗವಾಗಿ ಚಲಾಯಿಸಿದ್ದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಬಸ್ಸುಗಳು ಮುಖಾಮುಖಿ ಡಿಕ್ಕಿಯಾದ ಸಂದರ್ಭದಲ್ಲೂ ಎರಡು ಬಸ್ಸಿನ ಡ್ರೈವರ್ ಸೀಟಿನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಹಾಗಾಗಿ, ಎರಡು ಬಸ್ಸಿನ ಚಾಲಕರಿಗೂ ಗಂಭೀರ ಗಾಯವಾಗಿದೆ. ಇನ್ನು ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು 5 ಆಂಬುಲೆನ್ಸ್ ಗಳಲ್ಲಿ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು