News Kannada
Saturday, February 24 2024
ಬೆಂಗಳೂರು

ಶಾಕಿಂಗ್‌ ನ್ಯೂಸ್‌: ಗಣಿ-ಭೂವಿಜ್ಞಾನ ಇಲಾಖೆ ಅಧಿಕಾರಿ ಬರ್ಬರ ಹತ್ಯೆ

Shocking News: Mines and Geology Department Officer Barbara Killed
Photo Credit : News Kannada

ಬೆಂಗಳೂರು:  ಗಣಿ-ಭೂವಿಜ್ಞಾನ ಇಲಾಖೆಯ ಅಧಿಕಾರಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಣಿ-ಭೂವಿಜ್ಞಾನ ಇಲಾಖೆ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ (37) ಕೊಲೆಯಾದ ಅಧಿಕಾರಿ. ಪತಿಯಿಂದ ವಿಚ್ಛೇದನ ಪಡೆದು ಪ್ರತಿಮಾ ಸುಬ್ರಹ್ಮಣ್ಯಪುರದ ದೊಡ್ಡಕಲ್ಲಸಂದ್ರದ ಕುವೆಂಪು ನಗರದಲ್ಲಿ ಒಂಟಿಯಾಗಿ ವಾಸವಾಗಿದ್ದರು. ಪತಿ ಮತ್ತು ಮಗ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನೆಲೆಸಿದ್ದಾರೆ. ನ.4ರ ರಾತ್ರಿ ಪ್ರತಿಮಾ ಅವರ ಮನೆಗೆ ನುಗ್ಗಿ ಪರಾರಿಯಾಗಿದ್ದಾರೆ.

ಪ್ರತಿಮಾ ಶನಿವಾರ ರಾತ್ರಿ 8 ಗಂಟೆಗೆ ಇಲಾಖೆಯ ವಾಹನದಲ್ಲಿ ಕಚೇರಿಯಿಂದ ಮನೆಗೆ ಬಂದಿದ್ದರು. ರಾತ್ರಿ ಅಣ್ಣ ​ಕರೆ ಮಾಡಿದಾಗ ಸ್ವೀಕರಿಸಿ ಮಾತನಾಡಿದ್ದರು. ಬೆಳಿಗ್ಗೆ ಅಕ್ಕಪಕ್ಕದ ಮನೆಯವರು ಮನೆಗೆ ಬಂದು ನೋಡಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಪ್ರತಿಮಾ ನೆಲೆಸಿದ್ದ ಮನೆಯಲ್ಲಿ ಯಾವುದೇ ವಸ್ತು ಕಳ್ಳತನವಾಗಿಲ್ಲ. ಮೇಲ್ನೋಟಕ್ಕೆ ಉದ್ದೇಶಪೂರ್ವಕವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು