News Kannada
Saturday, March 02 2024
ಕ್ರೈಮ್

ತುಮಕೂರು ಬಸ್ ನಿಲ್ದಾಣದಲ್ಲಿ ಬಸ್​ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರು ಸಾವು

Two women die after being hit between buses at Tumkur bus stand
Photo Credit : News Kannada

ತುಮಕೂರು: ಎರಡು ಬಸ್​ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ನಡೆದಿದೆ. ಬಸ್​ ನಿಲ್ದಾಣದಲ್ಲಿ ಬಸ್ ಅನ್ನು ರಿವರ್ಸ್ ತೆಗೆಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಚಾಲಕನ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಶ್ರೀರಂಗಪಟ್ಟಣದ ಕೆ.ಶೆಟ್ಟಿಹಳ್ಳಿ ಗ್ರಾಮದ ಪುಟ್ಟತಾಯಮ್ಮ (60) ಮತ್ತು ಪಂಕಜ (50) ಮೃತ ದುರ್ದೈವಿಗಳು. ಉಚಿತ ಬಸ್ ಪ್ರಯಾಣ ಹಿನ್ನೆಲೆ ಕೆಎಸ್​ಆರ್​ಟಿಸಿ ಬಸ್​ ಮೂಲಕ ಗೊರವನಹಳ್ಳಿ ದೇವಸ್ಥಾನಕ್ಕೆ ಹೋಗಲು ಏಳು ಮಹಿಳೆಯುರುಳ್ಳ ತಂಡ ಬಸ್ ನಿಲ್ದಾಣಕ್ಕೆ ಆಗಮಿಸಿತ್ತು. ಈ ತಂಡದಲ್ಲಿದ್ದ ಇಬ್ಬರು ಬಸ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಚಿಕ್ಕಬಳ್ಳಾಪುರ ಡಿಪೋಗೆ ಸೇರಿದ ಕೆಎಸ್​ಆರ್​ಟಿಸಿ ಬಸ್​ ಚಾಲಕ ಗೋವಿಂದರಾಜು ಅವರು ಬಸ್ ಅನ್ನು ರಿವರ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಸದ್ಯ ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು