NewsKarnataka
Saturday, November 27 2021

ಆರೋಗ್ಯ

ಎದೆಹಾಲುಣಿಸಿ ಮಗುವಿನ ಆರೋಗ್ಯ ಕಾಪಾಡಿ!

ಎದೆಹಾಲುಣಿಸಿ ಮಗುವಿನ ಆರೋಗ್ಯ ಕಾಪಾಡಿ!

ಇವತ್ತು ಮಾರುಕಟ್ಟೆಗೆ ಪೋಷಕಾಂಶಯುಕ್ತ ಹಾಲಿನಂತಹ ಹಲವು ಪದಾರ್ಥಗಳು ಬಂದಿದ್ದರೂ ಅವುಗಳಿಂದ ಒಬ್ಬ ತಾಯಿಯ ಎದೆಹಾಲಿನ ಪೌಷ್ಠಿಕಾಂಶವನ್ನು ಕೊಡಲು ಸಾಧ್ಯವಿಲ್ಲದಾಗಿದೆ. ಹೀಗಾಗಿಯೇ ನಿಮ್ಮ ಮಗುವಿಗೆ ಎದೆಹಾಲನ್ನೇ ನೀಡಿ ಎಂದು ವೈದ್ಯರು ಸೇರಿದಂತೆ ಎಲ್ಲ ಹಿರಿಯರು ಹೇಳುತ್ತಾ ಬರುತ್ತಿದ್ದಾರೆ.ಇಂದಿನ ಫ್ಯಾಷನ್ ಯುಗದಲ್ಲಿ ಮಗುವಿಗೆ ಹಾಲು ಕೊಡುವುದಕ್ಕಿಂತಲೂ ಬಾಟಲಿ ಹಾಲು ಕೊಟ್ಟು ಕೈತೊಳೆದುಕೊಳ್ಳುವ ತಾಯಿಯಂದಿರು ಇದ್ದಾರೆ. ಇಂದು ಕಾರ್ಯಕ್ರಮಗಳ ಮೂಲಕ ತಾಯಿಯ ಹಾಲನ್ನು ನೀಡಿ ಎಂಬ ಅರಿವು ಮೂಡಿಸಬೇಕಾದ ಅನಿವಾರ್ಯತೆ ಎದುರಾಗಿದೆ.ಹೆಚ್ಚಿನ ಮಕ್ಕಳಿಗೆ ಪೌಷ್ಠಿಕಾಂಶದ ಕೊರತೆ ಎದ್ದು ಕಾಣುತ್ತಿದೆ. ಇದಕ್ಕೆ ಕಾರಣ ಮಗುವಿಗೆ ಚಿಕ್ಕಂದಿನಲ್ಲಿ ಎದೆಹಾಲು ನೀಡದಿರುವುದು ಎಂದರೆ ತಪ್ಪಾಗಲಾರದು. ಒಬ್ಬ ತಾಯಿ ಮಗುವಿಗೆ ಎದೆ ಹಾಲನ್ನೇ ಏಕೆ ಉಣಿಸಬೇಕು ಅದರ ಪ್ರಾಮುಖ್ಯತೆ ಏನು ಎಂಬುದರ ಬಗ್ಗೆ ತಿಳಿದಿದ್ದೇ ಆದರೆ ಖಂಡಿತಾ ಆಕೆ ಮಗುವಿಗೆ ಹಾಲುಣಿಸದಿರಳು. ಹಾಲಲ್ಲೇನಿದೆ ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಲೇ ಬೇಕಾಗಿದೆ.

ವೈದ್ಯಲೋಕದಲ್ಲಿ ಹುಟ್ಟಿದ ಮಗುವಿಗೆ ತಾಯಿಯ ಹಾಲು ಪೋಷಣೆಯ ಪ್ರಾಥಮಿಕ ಮೂಲವಾಗಿರುವುದರಿಂದ ಹಾಲುಣಿಸುವುದನ್ನು ಮಗುವಿನ ಜೀವನದ ಆರಂಭದ ಅವಧಿ ಎಂದೇ ಹೇಳಲಾಗುತ್ತದೆ. ಏಕೆಂದರೆ ಎದೆಹಾಲು ಮಗುವಿಗೆ ಸುರಕ್ಷಿತ, ಪೋಷಣೆ ಮತ್ತು ಆರೋಗ್ಯದ ಅಭಿವೃದ್ಧಿಯನ್ನು ಖಾತರಿಪಡಿಸುತ್ತದೆ. ಇದೊಂದು ರೀತಿಯ ನೈಸರ್ಗಿಕ ಆಹಾರವಾಗಿರುವುದರಿಂದ ಮಗುವಿಗೆ ಸುಲಭವಾಗಿ ಜೀರ್ಣ ಮಾಡಿಕೊಳ್ಳಲು ಸಾಧ್ಯವಾಗುತ್ತದೆ.ವೈದ್ಯರ ಪ್ರಕಾರ ಮಗುಹುಟ್ಟಿದ ಅರ್ಧ ಗಂಟೆಯೊಳಗೆ ಹಾಲುಕುಡಿಸಬೇಕು. ಒಂದು ವೇಳೆ ಸಿಸೇರಿಯನ್ ಮೂಲಕ ಮಗುಹುಟ್ಟಿದ್ದರೆ ನಾಲ್ಕು ಗಂಟೆ ಅವಧಿಯಲ್ಲಿ ಹಾಲುಣಿಸಬೇಕಂತೆ. ಜೇನುತುಪ್ಪ, ಗ್ಲೂಕೋಸ್, ಸಕ್ಕರೆ ಬೆರೆಸಿದ ನೀರು ನೀಡುವುದನ್ನು ತಪ್ಪಿಸಿ ಹಾಲನ್ನು ನೀಡಬೇಕು.

ತಾಯಿಯ ಎದೆಯಿಂದ ಮೊದಲ ಬಾರಿಗೆ ಬರುವ ಹಾಲು ರೋಗನಿರೋಧಕವಾಗಿರುತ್ತದೆ ಮತ್ತು ಇದರಲ್ಲಿ ಪ್ರೊಟೀನ್, ಖನಿಜಾಂಶ, ವಿಟಮಿನ್ ಇಷ್ಟೇ ಅಲ್ಲ ವಿಟಮಿನ್ ಎ, ಸೋಂಕು ನಿರೋಧಕಗಳು ಜಾಸ್ತಿ ಇರುತ್ತದೆ. ಮೂರು ದಿನಗಳ ಕಾಲ ಬರುವ ಹಾಲು ಗಾಢಹಳದಿ ಬಣ್ಣದಲ್ಲಿರುತ್ತದೆ. ಇದರಲ್ಲಿ ವಿರೇಚಕ ಗುಣವಿರುವುದರಿಂದ ಮಗುವಿನ ಆರೋಗ್ಯದ ದೃಷ್ಠಿಯಿಂದ ಸವರ್ವೋತ್ತಮವಾಗಿರುತ್ತದೆ. ಆದ್ದರಿಂದ ತಪ್ಪದೆ ನೀಡಬೇಕಾಗುತ್ತದೆ. ಮಗುವಿಗೆ ಆರು ತಿಂಗಳು ತುಂಬುವವರೆಗೂ ವಿಟಮಿನ್, ಖನಿಜಾಂಶ ಅಥವಾ ಔಷಧಿಗಳಂತಹ ಡ್ರಾಪ್ ಗಳನ್ನು ಹೊರತು ಪಡಿಸಿ ವೈದ್ಯರ ಸಲಹೆ ಇಲ್ಲದೆ ಯಾವುದೇ ರೀತಿಯ ಘನ ಅಥವಾ ದ್ರವ ರೂಪದ ಪದಾರ್ಥಗಳನ್ನು ನೀಡಬಾರದು. ಏಕೆಂದರೆ ಈ ರೀತಿಯ ಆಹಾರವನ್ನು ನೀಡುವುದರಿಂದ ಮಗು ಹಾಲು ಸೇವನೆಯನ್ನು ಕಡಿಮೆ ಮಾಡುವ ಸಾಧ್ಯತೆ ಹೆಚ್ಚಿರುತ್ತದೆ. ಪರಿಣಾಮ ಮಗುವಿನ ಆರೋಗ್ಯ ಕುಂಠಿತವಾಗಿವಾಗುತ್ತದೆ.

ಮಗುವಿಗೆ ಬೆಳಿಗ್ಗೆ ಮತ್ತು ರಾತ್ರಿ ಸಮಯದಲ್ಲಿ ಆಗಾಗ್ಗೆ ಹಾಲುಣಿಸಬೇಕು. ಇದನ್ನು ವೈದ್ಯರು ಬೇಡಿಕೆಯ ಸ್ತನ್ಯಪಾನ ಎಂದು ಕರೆಯುತ್ತಾರೆ. ಈ ಸಮಯದಲ್ಲಿ ಮಗುವಿಗೆ ಹಾಲಿನ ಅವಶ್ಯಕತೆಯಿರುತ್ತದೆ. ಹಾಗಾಗಿ ಮಗುವಿನ ಬೇಡಿಕೆಯನ್ನು ಅರಿತುಕೊಂಡು ಹಾಲನ್ನು ನೀಡಬೇಕಾಗುತ್ತದೆ. ತಾಯಂದಿರು ಹೆಚ್ಚಿನ ಸಮಯದವರೆಗೆ ಹಾಲುಣಿಸುವುದರಿಂದ ಉತ್ತಮ ಹಾಲು ಉತ್ಪಾದನೆಗೆ ಸಹಕಾರಿಯಾಗುತ್ತದೆ.ಮಗುವಿಗೆ ಆರು ತಿಂಗಳ ಕಾಲ ಕಡ್ಡಾಯವಾಗಿ ಹಾಲನ್ನು ಮಾತ್ರ ನೀಡಬೇಕು. ಆ ನಂತರ ವೈದ್ಯರ ಸಲಹೆ ಪಡೆದು ಪೂರಕ ಆಹಾರಗಳನ್ನು ನೀಡಲು ಶುರುಮಾಡಬಹುದು. ಮಗುವಿಗೆ ಎರಡು ವರ್ಷಗಳ ಕಾಲ ಹಾಲುಣಿಸಲು ಅಡ್ಡಿಯಿಲ್ಲ.

ವೈದ್ಯರ ಪ್ರಕಾರ ಮಗು ಆಗಾಗ ಹಾಲನ್ನು ಹೀರಿಕೊಳ್ಳುವುದು, ಸ್ತನದಲ್ಲಿ ಹಾಲು ಸಂಪೂರ್ಣ ಖಾಲಿಯಾದ ಅನುಭವ ಇದೆಲ್ಲವೂ ಯಶಸ್ವಿ ಹಾಲುಣಿಸುವಿಕೆಯ ಅಂಶಗಳಂತೆ. ಇನ್ನು ಅನಾರೋಗ್ಯದಿಂದ ಬಳಲುವ ಅಥವಾ ಔಷಧಿ ಸೇವಿಸುವ ತಾಯಂದಿರು, ವೈದ್ಯರು ಹಾಲು ನೀಡಬಾರದು ಎಂದು ಹೇಳುವ ತನಕ ಹಾಲುಣಿಸುವುದನ್ನು ನಿಲ್ಲಿಸಬಾರದು. ಒಂದು ವೇಳೆ ತಾತ್ಕಾಲಿಕವಾಗಿ ಹಾಲುಣಿಸುವುದನ್ನು ನಿಲ್ಲಿಸಿದ್ದರೆ ಮತ್ತೆ ವೈದ್ಯರ ಸಲಹೆ ಮೇರೆಗೆ  ಹಾಲುಣಿಸುವುದನ್ನು ಮುಂದುವರೆಸಬಹುದು.

ಎದೆಹಾಲು ಕುಡಿಸುವುದರಿಂದ ಮಗುವಿನ ಮೆದಳಿನ ಬೆಳವಣಿಗೆ ಮತ್ತು ದೀರ್ಘವಾಧಿಯ ಆರೋಗ್ಯ ಹೊಂದಲು ಸಹಾಯವಾಗುತ್ತದೆ. ಜತೆಗೆ ಸೋಂಕು ತಗಲುವ ಅಪಾಯ ಕಡಿಮೆಯಾಗುತ್ತದೆ. ಇಷ್ಟೇ ಅಲ್ಲದೆ ತಾಯಂದಿರ ಗರ್ಭಕೋಶದ ಪ್ರತ್ಯಾಕರ್ಷಣೆಗೂ ಸಹಕಾರಿಯಾಗುತ್ತದೆ ಎಂದು ಹೇಳಲಾಗಿದೆ. ಮಹಿಳೆಯರು ತಮ್ಮ ಸೌಂದರ್ಯದ ಬಗ್ಗೆ ತಲೆಕೆಡಿಸಿಕೊಳ್ಳದೆ ಮಗುವಿಗೆ ಹಾಲುಣಿಸುವುದನ್ನು ದೂರ ಮಾಡದಿರಿ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!