News Kannada
Friday, October 07 2022

ಆರೋಗ್ಯ

ಸಮತೋಲನದ ಆಹಾರ ಸೇವನೆಯಿಂದ ಗರ್ಭಿಣಿಯರು ಮತ್ತು ಮಕ್ಕಳು ಪೌಷ್ಠಿಕತೆ ಪಡೆಯಲು ಸಾಧ್ಯ - 1 min read

Photo Credit :

ಸಮತೋಲನದ ಆಹಾರ ಸೇವನೆಯಿಂದ ಗರ್ಭಿಣಿಯರು ಮತ್ತು ಮಕ್ಕಳು ಪೌಷ್ಠಿಕತೆ ಪಡೆಯಲು ಸಾಧ್ಯ

ಚಿಕ್ಕಮಗಳೂರು- ದಿನನಿತ್ಯ ಸಮತೂಕ ಹಾಗೂ ಸಮತೋಲನದ ಆಹಾರವನ್ನ ಸೇವಿಸುವುದರಿಂದ ಗರ್ಭಿಣಿಯರು ಮತ್ತು ಮಕ್ಕಳು ಪೌಷ್ಠಿಕತೆ ಪಡೆಯಲು ಸಾಧ್ಯ ಎಂದು ಜಿಲ್ಲಾ ಕೌಂಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಡಿ.ಟಿ.ದೇವೇಂದ್ರನ್ ತಿಳಿಸಿದರು.

ನಗರದ ಸ್ತ್ರೀ ಶಕ್ತಿ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಾರ್ತಾ ಇಲಾಖೆ, ಕಾನೂನು ಸೇವಾ ಪ್ರಾಧಿಕಾರ, ಶಿಶು ಅಭಿವೃದ್ಧಿ ಯೋಜನೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವಕೀಲರ ಸಂಘ, ತಾಲ್ಲೂಕು ಸ್ತ್ರೀ ಶಕ್ತಿ ಒಕ್ಕೂಟದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಪೌಷ್ಠಿಕ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದರು.

ತಾಯಿ, ಮಗು ಆರೋಗ್ಯವಾಗಿರಬೇಕು ಎನ್ನುವ ಕಾರಣಕ್ಕೆ ಗರ್ಭಿಣಿ ಸ್ತ್ರೀಯರಿಗೆ ಹಾಗೂ ಬಾಣಂತಿಯರಿಗೆ ಅಂಗನವಾಡಿ ಕಾರ್ಯಕರ್ತರು ದುಪ್ಪಟ್ಟು ಆಹಾರವನ್ನು ನೀಡುತ್ತಿದ್ದಾರೆ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಇದರಿಂದ ಸಹಕಾರಿಯಾಗುತ್ತದೆ. ಜಗತ್ತಿನಲ್ಲಿರುವ ಅಪೌಷ್ಠಿಕ ಮಕ್ಕಳ ಸಂಖ್ಯೆಯಲ್ಲಿ ಮೂರನೇ ಒಂದು ಭಾಗದಷ್ಟು ಮಕ್ಕಳು ಭಾರತದಲ್ಲೇ ಇದ್ದಾರೆ. ಇದು ಅತಂಕದ ಸಂಗತಿ. ಇದನ್ನು ಹೋಗಲಾಡಿಸಲು ಸರ್ಕಾರ ಯೋಜನೆಗಳನ್ನು ಹಮ್ಮಿಕೊಳ್ಳುತ್ತದೆ ಅದನ್ನು ವಿವಿದ ಇಲಾಖೆಗಳ ಮೂಲಕ ಜಾರಿ ತರುವ ಪ್ರಯತ್ನ ಯಶಸ್ಸಿ ಆಗಬೇಕಾಗುತ್ತದೆ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ ರಮೇಶ್ ಮಾತನಾಡಿ, ಪೌಷ್ಠಿಕತೆ ಎನ್ನುವುದು ಮಕ್ಕಳ ಹಕ್ಕು. ಈ ವಿಚಾರದಲ್ಲಿ ಶಕ್ತಿದಾಯಕವಾದ ಕೇಂದ್ರ ಬಿಂದುಗಳಾಗಿರುವ ಅಂಗನಾಡಿ ಕಾರ್ಯಕರ್ತರು ಅವರಿಗೆ ಈ ವಿಚಾರ ಮನವರಿಕೆ ಮಾಡಿಕೊಟ್ಟರೆ ಮಹಿಳೆಯರು ಮಕ್ಕಳು, ಗರ್ಭಿಣಿಯರು ಬಾಣಂತಿಯರಿಗೆ ತಲುಪುತ್ತದೆ ಎನ್ನುವ ಕಾರಣಕ್ಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

See also  ನಮ್ಮ ಇಷ್ಟದ ಸಿಹಿ...ಆರೋಗ್ಯಕ್ಕೆ ಕಹಿಯಾಗಬಹುದು!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು