News Kannada
Sunday, September 24 2023
ಆರೋಗ್ಯ

ತಂಬಾಕು ಸೇವನೆಯಿಂದ ದುಷ್ಪರಿಣಾಮ: ಡಾ.ಮಂಜುನಾಥ್

Harmful effects of tobacco consumption: Dr Manjunath
Photo Credit : News Kannada

ಮೈಸೂರು: ತಂಬಾಕಿನಲ್ಲಿ 300ಕ್ಕೂ ಹೆಚ್ಚು ವಿಷಕಾರಿ ಅಂಶಗಳಿದ್ದು, ತಂಬಾಕು ಸೇವನೆಯ ಪರಿಣಾಮ ನೇರವಾಗಿ ದೇಹದ ಪ್ರತಿಯೊಂದು ಪ್ರಮುಖ ಅಂಗದ ಮೇಲೆ ಪರಿಣಾಮವನ್ನು ಬೀರುತ್ತದೆ ಎಂದು ಡಿ ಆರ್ ಎಂ ಆಸ್ಪತ್ರೆಯ ನಿರ್ದೇಶಕರಾದ ಡಾ.ಮಂಜುನಾಥ್ ತಿಳಿಸಿದ್ದಾರೆ.

ಒಂಟಿಕೊಪ್ಪಲಿನಲ್ಲಿರುವ ಡಿ ಆರ್ ಎಂ ಆಸ್ಪತ್ರೆ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರದ ಸಹಯೋಗದೊಂದಿಗೆ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿ ಬಾಯಿ ಕ್ಯಾನ್ಸರ್ ನ್ನು ಮೊದಲ ಹಂತದಲ್ಲಿ ಪತ್ತೆ ಹಚ್ಚಿದಲ್ಲಿ ಶೇ.90 ಗುಣಪಡಿಸಬಹುದು. ನಾಲ್ಕನೇ ಹಂತದಲ್ಲಿ ಕ್ಯಾನ್ಸರ್ ಪತ್ತೆ ಹಚ್ಚಿದಲ್ಲಿ ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಾಗುವುದಿಲ್ಲ. ಬಾಯಿ ಕ್ಯಾನ್ಸರ್ ಗೆ ಸರ್ಜರಿ, ರೇಡಿಯೇಶನ್, ಕಿಮೋಥೇರಪಿ ಚಿಕಿತ್ಸೆಗಳಿದ್ದು, ಸರ್ಜರಿ ಮೂಲಕ ಸಂಪೂರ್ಣವಾಗಿ ಗುಣಪಡಿಸಬಹುದು ಎಂದರು.

ತಂಬಾಕು ಸೇವನೆ ಬಹುದೊಡ್ಡ ಸಮಸ್ಯೆಯಾಗಿದ್ದು, ಇದಕ್ಕೆ ಹೆಚ್ಚಾಗಿ ಬಲಿಯಾಗುತ್ತಿರುವವರು 15ಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಇದು ಬಹಳ ಅಪಾಯಕಾರಿ. ಮೋಜು, ಮಸ್ತಿಗಾಗಿ ಪ್ರಾರಂಭವಾಗಿ ಅದೊಂದು ಚಟವಾಗಿ ಪರಿವರ್ತನೆಯಾಗುತ್ತದೆ. ತಂಬಾಕು ಸೇವನೆಗೆ ಇತ್ತೀಚಿಗೆ ಯುವಜನತೆ ಹೆಚ್ಚಾಗಿ ಬಲಿಯಾಗುತ್ತಿದ್ದು ತಂಬಾಕು ಸುಲಭವಾಗಿ ಸಿಗದಂತೆ ಮಾಡಬೇಕು ಎಂದರು.

ಡಿ ಆರ್ ಎಂ ಆಸ್ಪತ್ರೆಯ ನಿರ್ದೇಶಕರಾದ ಡಿ ಟಿ ಪ್ರಕಾಶ್ ಮಾತನಾಡಿ, ತಂಬಾಕು ರಹಿತ ದಿನಾಚರಣೆಯು ಒಂದು ದಿನಕ್ಕೆ ಮಾತ್ರ ಸೀಮಿತವಾಗಿರದೇ ಪ್ರತಿ ನಿತ್ಯಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ತಂಬಾಕು ಸೇವನೆ ಮಾಡುವುದು ಕಂಡುಬಂದಲ್ಲಿ ತಂಬಾಕು ಸೇವನೆ ಮಾಡಿದವರಿಗೆ ಮಾತ್ರವಲ್ಲದೆ ಅವರ ಸಮೀಪವಿರುವರಿಗೂ ಕಾಯಿಲೆ ಬರುವ ಸಾಧ್ಯತೆ ಇರುವುದರಿಂದ ನಮಗೆ ಏಕೆ ಎಂದು ಸುಮ್ಮನಿರದೆ ಖಂಡಿಸಬೇಕು ಎಂದು ಹೇಳಿದರು.

ಇದೇ ವೇಳೆ 50 ಮಂದಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ಸ್ವಯಂ ಪ್ರೇರಿತ ರಕ್ತದಾನ ಮಾಡಿದರು

ಡಿ ಆರ್ ಎಂ ಆಸ್ಪತ್ರೆಯ ನಿರ್ದೇಶಕರಾದ ಡಾಕ್ಟರ್ ಮಂಜುನಾಥ್, ಡಿ ಟಿ ಪ್ರಕಾಶ್, ಘಟಕ ಮುಖ್ಯಸ್ಥರಾದ ಚಿದು, ಜೀವದಾರರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಮುತ್ತಣ್ಣ, ರಶ್ಮಿ, ಜನರಲ್ ಮ್ಯಾನೇಜರ್ ಲೋಕೇಶ್, ಅಕೌಂಟ್ ಮ್ಯಾನೇಜರ್ ಸಂಜಯ್, ಆಸ್ಪತ್ರೆಯ ಸಿಬ್ಬಂದಿಗಳಾದ ಜಬ್ಬಿ, ಲಾವಣ್ಯ, ರೂಪ ,ನಂದಿನಿ,ತೆಂಜಿಲ್ ಹಾಗೂ ಸಿಬ್ಬಂದಿ ಹಾಜರಿದ್ದರು

See also  ಆರೋಗ್ಯಕರ ಬದುಕಿಗೆ ಮನೆ-ಮನ ಶುಚಿಯಾಗಿರಲಿ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು