News Kannada
Saturday, May 14 2022
ಸಮುದಾಯ

ಕಡಬ : ಬ್ಲಾಕ್ ವ್ಯಾಪ್ತಿಯ ಜಿಲ್ಲಾ ಪಂಚಾಯತ್, ಪ್ರತಿನಿಧಿಗಳೊಂದಿಗೆ ಸಂವಾದ ಕಾರ್ಯಕ್ರಮ

ಕಡಬ : ಇಲ್ಲಿನ ಬ್ಲಾಕ್‌ ವ್ಯಾಪ್ತಿಯ ಕೊಯ್ಲ, ನೆಲ್ಯಾಡಿ, ಸುಬ್ರಹ್ಮಣ್ಯ, ಸವಣೂರು ಜಿಲ್ಲಾ ಪಂಚಾಯತ್ ಕ್ಷೇತ್ರವಾರು ಸಂವಾದ ಸಭೆ ಕಾರ್ಯಕ್ರಮವನ್ನು ವಿಧಾನ ಪರಿಷತ್ತಿನ ಸದಸ್ಯರಾದ ಮಂಜುನಾಥ ಭಂಡಾರಿಯವರು ನಡೆಸಿಕೊಟ್ಟರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು , ವಿಧಾನ ಪರಿಷತ್ತಿನ ಸದಸ್ಯರಾದ ಕೆ.ಹರೀಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ದ.ಕ ಜಿಲ್ಲಾ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು , ಕಡಬ ಬ್ಲಾಕ್‌ನ ಅಧ್ಯಕ್ಷರಾದ ಶ್ರೀ ಸುಧೀರ್ ಕುಮಾರ್ ಶೆಟ್ಟಿಯವರು ಭಾಗವಹಿಸಿದರು.
 ಸಭೆಯಲ್ಲಿ ಪಂಚಾಯತ್ ಗೆ ಸಂಬಂಧಪಟ್ಟ ವಿಷಯಗಳಾದ ಜಮೀನಿನ ಸಮಸ್ಯೆ, 9 & 11 , ಅನುದಾನದ ಕೊರತೆ ಹೀಗೆ ಹಲವಾರು ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ವಿಧಾನ ಪರಿಷತ್ತಿನ ಸದಸ್ಯರಾದ ಮಂಜುನಾಥ ಭಂಡಾರಿಯವರು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಶೀಘ್ರ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಯನ್ನು ಆಗ್ರಹಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರು ಪಿ ಪಿ ವರ್ಗೀಸ್, ಸರ್ವೋತ್ತಮ ಗೌಡ, ಡಾ.ರಘು ಕೆಪಿಸಿಸಿ ಉಸ್ತುವಾರಿ, ಕೃಷ್ಣಪ್ಪ ವಿಜಯ ಕುಮಾರ್ ಸೊರಕೆ, ಥಾಮಸ್ , ಶೀನಪ್ಪ ಗೌಡ ಗಂಗಾಧರ್ ಶೆಟ್ಟಿ ಉಪಸ್ಥಿತರಿದ್ದರು.
Report credit : ಮಂಜುನಾಥ ಭಂಡಾರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616
Subscribe to our Brand New YouTube Channel

Subscribe Newsletter

Get latest news karnataka updates on your email.