News Kannada
Sunday, October 01 2023
ಬೆಂಗಳೂರು ನಗರ

ರಾಜಕೀಯ ಪ್ರಾತಿನಿಧ್ಯ ಹಾಗೂ ನೇಕಾರರ ಸಮುದಾಯಗಳ ಅಭಿವೃದ್ದಿ ನಿಗಮ ಆರಂಭಿಸಲು ಒತ್ತಾಯ

Demand for political representation and setting up of weavers' communities development corporation
Photo Credit : News Kannada

ಬೆಂಗಳೂರು, ಫೆ.14: ರಾಜ್ಯದಲ್ಲಿ ಸುಮಾರು 60 ಲಕ್ಷದಷ್ಟು ಜನಸಂಖ್ಯೆಯನ್ನು ಹೊಂದಿರುವ ನೇಕಾರ ಸಮುದಾಯಗಳಿಗೆ ರಾಜಕೀಯ ಪಕ್ಷಗಳು ಕನಿಷ್ಠ 5 ಕ್ಷೇತ್ರಗಳಲ್ಲಿ ಟಿಕೆಟ್ ಕೊಟ್ಟು ಸಮಾಜದ ರಾಜಕೀಯ ಬಲಾಡ್ಯತೆಗೆ ಮುಂದಾಗಬೇಕು. ಅಲ್ಲದೇ, ಮುಂದಿನ ಆಯವ್ಯದಲ್ಲಿ ಸರ್ಕಾರ ನೇಕಾರ ಸಮುದಾಯಗಳ ಅಭಿವೃದ್ದಿಗೆ ʼನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮ’ ವನ್ನು ಪ್ರಾರಂಭಿಸಬೇಕು ಎಂದು ನೇಕಾರರ ಸಮುದಾಯಗಳ ಮಠಾಧೀಶರುಗಳು ಇಂದು ಒಕ್ಕೊರಲಿನಿಂದ ಆಗ್ರಹಿಸಿದರು.

ಇಂದು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದ ಹಂಪೆಯ ಶ್ರೀ ಗಾಯತ್ರಿಪೀಠ ಮಹಾಸಂಸ್ಥಾನದ ಶ್ರೀ ದಯಾನಂದ ಪುರಿ ಸ್ವಾಮೀಜಿ, ಗುಳೇದಗುಡ್ಡ ಶ್ರೀ ಗುರುಬಸವ ಕೇಂದ್ರದ 1008 ಜಗದ್ಗುರು ಶ್ರೀ ಬಸವರಾಜ ಪಟ್ಟದಾರ್ಯ ಸ್ವಾಮೀಜಿ, ದೊಡ್ಡಬಳ್ಳಾಪುರದ ಶ್ರೀ ದಿವ್ಯ ಜ್ಞಾನಾನಂದಗಿರಿ ಸ್ವಾಮೀಜಿ, ಹರಿಹರದ ಶ್ರೀ ಪ್ರಭುಲಿಂಗ ಸ್ವಾಮೀಜಿ, ಹಳೇ ಹುಬ್ಬಳಿಯ ಶ್ರೀ ಶಿವಶಂಕರ ಶಿವಾಚಾರ್ಯ ಸ್ವಾಮೀಜಿ, ಬಾಗಲಕೋಟೆಯ ಶ್ರೀ ಘನಲಿಂಗ ಮಹಾಸ್ವಾಮಿಗಳು ಮತ್ತು ಯಾದಗಿರಿಯ ಡಾ. ಈಶ್ವರಾನಂದ ಸ್ವಾಮೀಜಿಗಳು ಒಕ್ಕೊರಲಿನಿಂದ ರಾಜಕೀಯ ಪಕ್ಷಗಳನ್ನು ಹಾಗೂ ರಾಜ್ಯ ಸರಕಾರವನ್ನು ಆಗ್ರಹಿಸಿದರು.

ಹಂಪೆಯ ಶ್ರೀ ಗಾಯತ್ರಿಪೀಠ ಮಹಾಸಂಸ್ಥಾನದ ಶ್ರೀ ದಯಾನಂದ ಪುರಿ ಸ್ವಾಮೀಜಿ ಮಾತನಾಡಿ, ನೇಕಾರಿಕೆಯನ್ನು ಕುಲವೃತ್ತಿಯನ್ನಾಗಿ ಅಳವಡಿಸಿಕೊಂಡಿರುವ ರಾಜ್ಯದ ನೇಕಾರರು ಹಿಂದುಳಿದ ವರ್ಗಗಳ ಗುಂಪಿಗೆ ಸೇರಿದವರಾಗಿದ್ದಾರೆ. ರಾಜ್ಯದಲ್ಲಿ 29 ಒಳಪಂಗಡಗಳ ಹೆಸರಿನಲ್ಲಿ ಗುರುತಿಸಿಕೊಂಡಿರುವ ನೇಕಾರ ಸಮುದಾಯವು ಸುಮಾರು 60 ಲಕ್ಷ ಜನಸಂಖ್ಯೆಯನ್ನು ಹೊಂದಿದೆ. ನೇಕಾರಿಕೆಯನ್ನು ಅವಲಂಬಿಸಿಕೊಂಡಿರುವ ನೇಕಾರರು ಇಂದು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಸಮುದಾಯ ಮತ್ತು ಸಮುದಾಯ ಅವಲಂಬಿಸಿರುವ ನೇಕಾರಿಕೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳಿಗೆ ಹಾಗೂ ರಾಜ್ಯ ಸರಕಾರಕ್ಕೆ ಒಕ್ಕೊರಲಿನ ಒತ್ತಾಯವನ್ನು ಮಾಡುತ್ತಿದ್ದೇವೆ ಎಂದರು.

ಗುಳೇದಗುಡ್ಡ ಶ್ರೀ ಗುರುಬಸವ ಕೇಂದ್ರದ 1008 ಜಗದ್ಗುರು ಶ್ರೀ ಬಸವರಾಜ ಪಟ್ಟದಾರ್ಯ ಸ್ವಾಮೀಜಿ ಮಾತನಾಡಿ, ನೇಕಾರರು ಸರ್ಕಾರದ ಮುಂದೆ ಇಟ್ಟಿರುವ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರವು ಆದ್ಯ ಗಮನಹರಿಸಬೇಕು. ನೇಕಾರ ಪರವಾದ ಸಂಘಟನೆಗಳು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಡೆಸಿದ ಹೋರಾಟದ ಫಲವಾಗಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ರವರು ಇತ್ತೀಚೆಗೆ ನೇಕಾರ ಸಮ್ಮಾನ್”, ಯೋಜನೆಯ ಮೊತ್ತವನ್ನು 5,000/- ರೂ.ಗಳವರೆಗೆ ಹೆಚ್ಚಳ, ಎರಡು ಲಕ್ಷದವರೆಗೆ ಶೂನ್ಯ ಬಡ್ಡಿರಹಿತ ಸಾಲದ ಯೋಜನೆಗಳನ್ನು ಪ್ರಕಟಿಸಿದ್ದಕ್ಕಾಗಿ ಸಮಸ್ತ ನೇಕಾರ ಸಮುದಾಯಗಳ ಪರವಾಗಿ ಸರ್ಕಾರ ಮತ್ತು ಮುಖ್ಯಮಂತ್ರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದರು.

ದೊಡ್ಡಬಳ್ಳಾಪುರದ ಶ್ರೀ ದಿವ್ಯ ಜ್ಞಾನಾನಂದಗಿರಿ ಸ್ವಾಮೀಜಿ ಮಾತನಾಡಿ, ರಾಜ್ಯದ ಪ್ರತಿಯೊಂದು ಚುನಾವಣೆಯಲ್ಲೂ ನೇಕಾರರು ಪ್ರಮುಖ ಪಾತ್ರವನ್ನು ವಹಿಸುತ್ತಾ ಬಂದಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಸಮುದಾಯವು ಶೈಕ್ಷಣಿಕವಾಗಿ ಈಗೀಗ ಒಂದಿಷ್ಟು ಸುಧಾರಣೆಯನ್ನು ಕಾಣುತ್ತಿರುವುದು ನೆಮ್ಮದಿಯ ಸಂಗತಿಯಾದರೂ, ಯಾವುದೇ ಸಮುದಾಯ ಬಲಿಷ್ಠಗೊಳ್ಳಲು ರಾಜಕೀಯ ಪ್ರಾತಿನಿಧ್ಯ ಅತ್ಯಗತ್ಯವಾಗಿರುತ್ತದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನೇಕಾರ ಸಮುದಾಯ ಪ್ರಾತಿನಿಧ್ಯವನ್ನು ಕಂಡುಕೊಳ್ಳುವ ಮೂಲಕ ರಾಜಕೀಯ ಅಸ್ತಿತ್ವವನ್ನು ಹೊಂದಬಹುದಾಗಿದೆ. ಆದಕಾರಣ ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ನೇಕಾರ ಸಮುದಾಯಗಳಿಗೆ ಕನಿಷ್ಠ 5 ಕ್ಷೇತ್ರಗಳಲ್ಲಿ ಟಿಕೆಟ್ ಕೊಟ್ಟು ಸಮಾಜದ ರಾಜಕೀಯ ಬಲಾಡ್ಯತೆಗೆ ಮುಂದಾಗಬೇಕೆಂಬುದು ನೇಕಾರ ಮಠಾಧೀಶರುಗಳ ಒತ್ತಾಯವಾಗಿದೆ ಎಂದು ಹೇಳಿದರು.

See also  ಸಿದ್ದರಾಮಯ್ಯ ಸಭೆ ಬಹಿಷ್ಕರಿಸಿದ ದಲಿತ ಸಂಘಟನೆ ಮುಖಂಡರು

ಹರಿಹರದ ಶ್ರೀ ಪ್ರಭುಲಿಂಗ ಸ್ವಾಮೀಜಿ ಮಾತನಾಡಿ, ಇದರ ಜೊತೆಗೆ ಸುಧೀರ್ಘ ಕಾಲದಿಂದ ‘ನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮ’ ವನ್ನು ಸ್ಥಾಪಿಸಬೇಕೆಂಬ ಬೇಡಿಕೆಯನ್ನು ಹಲವಾರು ಬಾರಿ ಸರ್ಕಾರದ ಮುಂದೆ ಇಟ್ಟಿದ್ದೇವೆ. ನಮ್ಮ ಸಮುದಾಯದ ಯುವಕರು ನೇಕಾರಿಕೆಯನ್ನು ಕೈಬಿಟ್ಟು ಇತರೆ ಉದ್ಯೋಗಗಳನ್ನು ಅವಲಂಬಿಸುತ್ತಿದ್ದಾರೆ. ಪರಿಸ್ಥಿತಿಯಲ್ಲಿ ನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದರೆ ನೇಕಾರಿಕೆಯಿಂದ ದೂರ ಉಳಿಯುತ್ತಿರುವ ಜಾತಿ ಆಧಾರಿತ ನೇಕಾರರನ್ನು ಪುನಃ ನೇಕಾರಿಕೆಗೆ ಕರೆತರಲು ಸಾಧ್ಯವಾಗಲಿದೆ. ಆದಕಾರಣ ʼನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮ’ ತುರ್ತು ಅಗತ್ಯವಿದೆ. ಸಧ್ಯದಲ್ಲೇ ಮಂಡಿಸಲಿರುವ ‘ಆಯವ್ಯಯ’ದಲ್ಲಿ ನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮ ರಚನೆಯನ್ನು ಘೋಷಿಸಿ ಅದರ ಕಾರ್ಯನಿರ್ವಹಣೆಗೆ 500 ಕೋಟಿ ರೂ.ಗಳ ಅನುದಾನವನ್ನು ಮೀಸಲಿರಿಸಬೇಕೆಂದು ಮಠಾಧೀಶರುಗಳು ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಹೇಳಿದರು.

ಹಳೇ ಹುಬ್ಬಳಿಯ ಶ್ರೀ ಶಿವಶಂಕರ ಶಿವಾಚಾರ್ಯ ಸ್ವಾಮೀಜಿ, ಬಾಗಲಕೋಟೆಯ ಶ್ರೀ ಘನಲಿಂಗ ಮಹಾಸ್ವಾಮಿಗಳು ಮತ್ತು ಯಾದಗಿರಿಯ ಡಾ. ಈಶ್ವರಾನಂದ ಸ್ವಾಮೀಜಿಗಳು ಹಾಗೂ ನೇಕಾರರ ಸಮುದಾಯಗಳ ಮುಖಂಡರುಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು