ನಂಜನಗೂಡು: ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ.
ಇಂದು ಚಂದ್ರಮನ ಯುಗಾದಿ ಹಬ್ಬದಂದು ನಂಜುಂಡೇಶ್ವರನ ದರ್ಶನ ಪಡೆಯಲು ರಾಜ್ಯದ ವಿವಿಧ ಭಾಗಗಳಿಂದ ಭಕ್ತರ ದಂಡೆ ಆಗಮಿಸಿದೆ.
ನಂಜನಗೂಡು ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ದೇವರಿಗೆ ಕ್ಷೀರಾಭಿಕ್ಷೇಕ, ಪಂಚಾಮೃತ ಅಭಿಷೇಕ, ಫಲಪುಷ್ಪ ಅಭಿಷೇಕ ಸೇರಿದಂತೆ ವಿವಿ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಾಯಿತು ಕಪಿಲಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿ, ದೂಪ, ದೀಪ, ಉರುಳು ಸೇವೆ ಮಾಡಿ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು ಲಾಡು ಪ್ರಸಾದಕ್ಕೆ ಹೆಚ್ಚಿನ ಬೇಡಿಕೆ ಕಂಡು ಬಂದಿದ್ದು, ಭಕ್ತರಿಗೆ ದಾಸೋಹ ಭವನದಲ್ಲಿ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು ಹರಕೆ ಹೊತ್ತ ಭಕ್ತರು ಮಜ್ಜಿಗೆ, ಪಾನಕ, ಕೋಸಂಬರಿಯನ್ನು ವಿತರಣೆ ಮಾಡಿದರು.