News Kannada
Friday, September 30 2022

ಆರೋಗ್ಯ

ರಕ್ತದಾನ ಮಾಡುವುದರಿಂದ ಯಾವುದೇ ತೊಂದರೆಯಿಲ್ಲ! - 1 min read

Photo Credit :

ಜೂ.14ನ್ನು ವಿಶ್ವ ರಕ್ತದಾನಿಗಳ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ವೇಳೆ ಬಹಳಷ್ಟು ಮಂದಿಗೆ ರಕ್ತದಾನದ ಕುರಿತಂತೆ ತಪ್ಪು ಕಲ್ಪನೆಗಳಿದ್ದು ಅದನ್ನು ದೂರ ಮಾಡುವ ನಿಟ್ಟಿನಲ್ಲಿ ಒಂದಷ್ಟು ಸಲಹೆಗಳನ್ನು ನೀಡುವುದು ಬಹುಮುಖ್ಯವಾಗಿದೆ.

ಇವತ್ತು ರಕ್ತ ಎಷ್ಟು ಮುಖ್ಯ ಎಂಬುದು ನಮಗೆಲ್ಲರಿಗೂ ಗೊತ್ತಿದೆ. ಆದರೆ ರಕ್ತವನ್ನು ನೀಡುವಲ್ಲಿ ನಾವೆಲ್ಲರೂ ಒಂದಲ್ಲ ಕಾರಣದಿಂದ ಹಿಂದೇಟು ಹಾಕುತ್ತಿದ್ದೇವೆ. ಈ ನಡುವೆ ಆಗಾಗ್ಗೆ ರಕ್ತವನ್ನು ದಾನ ಮಾಡುವ ಮೂಲಕ ಸಮಾಜಕ್ಕೆ ಕೊಡುಗೆಯಾಗಿ ಉಳಿದವರು ಹಲವಾರು ಮಂದಿ ನಮ್ಮಲ್ಲಿದ್ದಾರೆ.

ರಕ್ತದಾನ ಮಾಡುವುದರ ಬಗ್ಗೆ ಮತ್ತು ರಕ್ತವನ್ನು ಪಡೆದುಕೊಳ್ಳುವುದರ ಕುರಿತಂತೆ ಹಲವು ರೀತಿಯ ಆಧಾರ ರಹಿತ ಮಾತುಗಳು ಜನವಲಯದಲ್ಲಿದೆ. ಅವು ಸಂಪೂರ್ಣ ಅಂತೆಕಂತೆ ಸುದ್ದಿಗಳು. ಅವುಗಳನ್ನೇ ನಂಬುವ ಹಲವು ಜನ ರಕ್ತದಾನ ಎಂದರೆ ಭಯಪಡುತ್ತಾರೆ. ರಕ್ತದಾನವೇ ಮಹಾದಾನ ಎನ್ನುವುದರಲ್ಲಿ ಎರಡು ಮಾತಿಲ್ಲ. ಆದ್ದರಿಂದ ಆರೋಗ್ಯವಂತರು ರಕ್ತದಾನ ಮಾಡುವ ಮೂಲಕ ಮತ್ತೊಂದು ಪ್ರಾಣವನ್ನು ಉಳಿಸಲು ಸಾಧ್ಯವಿದೆ.

ರಕ್ತದಾನ ಮಾಡುವ ಬಗ್ಗೆ ಕೆಲವು ತಪ್ಪು ಕಲ್ಪನೆಯಿರುವುದರಿಂದ ಆ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಪಡೆದು ಮುನ್ನಡೆಯುವುದು ಒಳ್ಳೆಯದು. 18 ರಿಂದ 60ವರ್ಷದೊಳಗಿನ 45ಕೆ.ಜಿ.ಗಿಂತಲೂ ಹೆಚ್ಚು ತೂಕವಿರುವ, 12.5 ಗ್ರಾಂ.ಗಿಂತಲೂ ಹೆಚ್ಚು ಹಿಮೋಗ್ಲೋಬಿನ್ ಅಂಶ ಹೊಂದಿರುವ ಎಲ್ಲ ಆರೋಗ್ಯವಂತರೂ ರಕ್ತದಾನ ಮಾಡಬಹುದಾಗಿದೆ.

ದೇಶದಲ್ಲಿ ಪ್ರತಿ 2ಸೆಕೆಂಡಿಗೆ ಒಬ್ಬ ರೋಗಿಗೆ ರಕ್ತದ ಅವಶ್ಯಕತೆ ಇರುವುದಾಗಿ ಸಮೀಕ್ಷೆಯೊಂದು ಹೇಳಿದೆ. ನಮ್ಮ ದೇಶದಲ್ಲಿ ರಕ್ತದ ಬೇಡಿಕೆ ಸುಮಾರು 4 ಕೋಟಿ ಯೂನಿಟ್‌ಗಳಾಗಿದ್ದು, ಕೇವಲ 5 ಲಕ್ಷ ಯೂನಿಟ್‌ಗಳಷ್ಟು ಮಾತ್ರ ರಕ್ತದ ಪೂರೈಕೆಯಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಆರೋಗ್ಯವಂತ ವ್ಯಕ್ತಿಯ ದೇಹದಲ್ಲಿ ಸರಾಸರಿ 5.5 ರಿಂದ 6 ಲೀಟರ್‌ನಷ್ಟು ರಕ್ತ ಇರುತ್ತದೆ. ರಕ್ತ ಕೊಡುವ ವ್ಯಕ್ತಿಯಿಂದ ಕೇವಲ 350 ಮಿಲಿಯಷ್ಟೇ ರಕ್ತವನ್ನು ದಾನಿಯಿಂದ ತೆಗೆದುಕೊಳ್ಳುವುದರಿಂದ ಯಾವುದೇ ಅಪಾಯವಾಗುವುದಿಲ್ಲ. ಆದ್ದರಿಂದ ಎಲ್ಲ ಆರೋಗ್ಯವಂತ ಪುರುಷರು ಹಾಗೂ ಮಹಿಳೆಯರು ಪ್ರತಿ ಮೂರರಿಂದ ನಾಲ್ಕು ತಿಂಗಳಿಗೊಮ್ಮೆ ನಿರಾತಂಕವಾಗಿ ರಕ್ತದಾನ ಮಾಡಬಹುದು. ಸಾಮಾನ್ಯವಾಗಿ ದಾನಿಯಿಂದ ಪಡೆದ ರಕ್ತವನ್ನು 35 ದಿನಗಳವರೆಗೆ ಅದು ಯಾವುದೇ ರೀತಿಯಲ್ಲಿಯೂ ಹಾಳಾಗದಂತೆ ವಿಶೇಷ ರೆಫ್ರಿಜಿರೇಟರ್‌ಗಳಲ್ಲಿ ಶೇಖರಿಸಿಟ್ಟು ಉಪಯೋಗಿಸಲಾಗುತ್ತದೆ.

18 ವರ್ಷಕ್ಕಿಂತ ಕಡಿಮೆ ಇರುವ ಲಿವರ್, ಮೂತ್ರಪಿಂಡ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುವವರು, ಗರ್ಭಿಣಿಯರು, ಋತುಸ್ರಾವದಲ್ಲಿರುವ ಮಹಿಳೆಯರು, ಮಗುವಿಗೆ ಹಾಲುಣಿಸುವ ತಾಯಂದಿರು, ದೊಡ್ಡ ಪ್ರಮಾಣದ ಶಸ್ತ್ರ ಚಿಕಿತ್ಸೆಗೆ ಒಳಗಾದವರು, ಒಂದು ವರ್ಷದವರೆಗೆ ರಕ್ತ ವರ್ಗಾವಣೆ ಮಾಡಿಸಿಕೊಂಡವರು, ಆರು ತಿಂಗಳವರೆಗೆ ಯಾವುದಾದರು ಕಾಯಿಲೆಯ ವಿರುದ್ಧ ಲಸಿಕೆಗಳನ್ನು ತೆಗೆದುಕೊಂಡವರು ಮುಂದಿನ ಆರು ತಿಂಗಳವರೆಗೆ ರಕ್ತದಾನ ಮಾಡಬಾರದಾಗಿದೆ.

ಇನ್ನು ರಕ್ತದಾನ ಮಾಡಿದ ವ್ಯಕ್ತಿಗೆ ಹೆಚ್ಚೆಂದರೆ ಒಂದು ತಾಸಿನ ವಿಶ್ರಾಂತಿ ಸಾಕಾಗುತ್ತದೆ. ಜೊತೆಗೆ ಯಾವುದೇ ರೀತಿ ಔಷಧದ ಅಗತ್ಯವಿರುವುದಿಲ್ಲ, ವ್ಯಕ್ತಿಯು ರಕ್ತದಾನ ಮಾಡಿದ ಆ ದಿನ ನೀರನ್ನು ಹೆಚ್ಚಾಗಿ ಕುಡಿಯಬೇಕು. ರಕ್ತದಾನದ ಕೆಲವು ತಾಸುಗಳೊಳಗಾಗಿ ದಾನಿಯ ದೇಹದಲ್ಲಿ ಹೊಸ ರಕ್ತಕಣಗಳನ್ನು ಉತ್ವಾದಿಸಲು ಪ್ರಾರಂಭಿಸುತ್ತದೆ. ಮುಂದಿನ ಮೂರು ತಿಂಗಳೊಳಗಾಗಿ ದಾನಿಯ ದೇಹದಲ್ಲಿ ಮರು ರಕ್ತ ತಯಾರಾಗುತ್ತದೆ.

See also  ಮನುಷ್ಯನನ್ನು ಕಾಡುವ ಮಧುಮೇಹದತ್ತ ಎಚ್ಚರವಾಗಿರಿ!

ಇನ್ನೂ ರಕ್ತ ವರ್ಗಾವಣೆಯಿಂದ ಯಾವುದಾದರೂ ರೋಗ ಅಥವಾ ಸೋಂಕು ತಗಲುತ್ತದೆ ಎಂಬ ಭಯವೂ ಕೆಲವರಲ್ಲಿದೆ. ರಕ್ತದಾನ ಮಾಡುವ ದಾನಿಯಿಂದ ಸ್ವೀಕರಿಸಿದ ರಕ್ತವನ್ನು ರಕ್ತನಿಧಿಗಳಲ್ಲಿ ಹೆಪಟೈಟಿಸ್ ಬಿ. ಹೆಪಟೈಟಿಸ್ ಸಿ. ಎಚ್‌ಐವಿ, ಮಲೇರಿಯಾ, ಸಿಫಿಲಿಸ್ ಮುಂತಾದ ಸೂಕ್ಷಾಣುಗಳಿಗಾಗಿ ಪರೀಕ್ಷಿಸಿ. ರೋಗಾಣುಗಳಿಂದ ಮುಕ್ತವಾದ ರಕ್ತವನ್ನು ಮಾತ್ರವೇ ಅವಶ್ಯಕತೆ ಇರುವರಿಗೆ ವರ್ಗಾಯಿಸುತ್ತಾರೆ. ಅಲ್ಲದೆ ದಾನಿಯಿಂದ ರಕ್ತವನ್ನು ಸ್ವೀಕರಿಸುವಾಗಲೂ ಸಂಸ್ಕರಿಸಿದ ಶುದ್ಧವಾದ ಉಪಕರಣಗಳನ್ನು ಬಳಸುತ್ತಾರೆ ಹಾಗಾಗಿ ರಕ್ತದಾನ ಪ್ರಕ್ರಿಯೆಯಲ್ಲಿ ದಾನಿಗಾಗಲೀ, ರಕ್ತ ವಗಾವಣೆ ಮಾಡಿಸಿಕೊಂಡವರಿಗಾಗಲಿ ಸೋಂಕಿನ ಭಯ ಬೇಡ. ಯಾವುದೇ ಭಯ ಆತಂಕಗಳಿಲ್ಲದೆ ಪ್ರತಿಯೊಬ್ಬ ವ್ಯಕ್ತಿಯೂ ಸ್ವ ಇಚ್ಛೆಯಿಂದ ರಕ್ತದಾನವನ್ನು ಮಾಡಬಹುದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು