News Kannada
Monday, February 06 2023

ಅಂಕಣ

ತ್ವಚೆಯ ಹೊಳಪಿಗಾಗಿ ಕಿತ್ತಳೆ ಹಣ್ಣಿನ ಸಿಪ್ಪೆಯ ಫೇಸ್ ಪ್ಯಾಕ್

Orange peel face pack for skin glow
Photo Credit : Freepik

ಕಿತ್ತಳೆ ಹಣ್ಣು ತಿನ್ನಲು ರುಚಿಕರವು ಹೌದು ಜೊತೆಗೆ ನಮ್ಮ ಸೌಂದರ್ಯ ವರ್ಧಕ ಗುಣವನ್ನು ತನ್ನೊಳಗೆ ತುಂಬಿಕೊಂಡಿದೆ. ಇನ್ನು ಈ ಕಿತ್ತಳೆ ಹಣ್ಣಿನ ಸಿಪ್ಪೆಯ ವಿಷಯಕ್ಕೆ ಬಂದರೆ, ಈ ಸಿಪ್ಪೆಯಲ್ಲಿ ಹೇರಳವಾಗಿ ವಿಟಮಿನ್ ಸಿ ಇದೆ. ಈ ಕಾರಣದಿಂದ  ಹೊಳೆಯುವ ಚರ್ಮವನ್ನು ಪಡೆಯಲು ಇದು ತುಂಬನೇ ಸಹಕಾರಿಯಾಗಿದೆ. ಈ ಕಿತ್ತಳೆ ಸಿಪ್ಪೆಯಿಂದ ಫೇಸ್ ಪ್ಯಾಕ್ ಮಾಡಲು ಇಲ್ಲಿದೆ ಸಲಹೆಗಳು.

ಫೇಸ್ ಪ್ಯಾಕ್ ಮಾಡಲು ಒಂದು ಚಮಚ ಕಿತ್ತಳೆ ಸಿಪ್ಪೆಯ ಪುಡಿಗೆ ನೀರು ಸೇರಿಸಿ. ಈ ಪೇಸ್ಟ್ ಅನ್ನು ಮುಖ ಮತ್ತು ಕುತ್ತಿಗೆಗೆ ಅನ್ವಯಿಸಿ, ಕೆಲ ನಿಮಿಷಗಳ ನಂತರ ನೀರಿನಿಂದ ತೊಳೆಯಿರಿ. ನೀವು ಇದನ್ನು ವಾರಕ್ಕೆ 2 ರಿಂದ 3 ಬಾರಿ ಬಳಸಿ. ಹೀಗೆ ಮಾಡುದರಿಂದ ಮುಖ ಹೊಳಪು ಪಡೆಯುತ್ತದೆ.

ಮುಖದ ಅಂದವನ್ನು ಹೆಚ್ಚಿಸಲು ಕಿತ್ತಳೆ ಹಣ್ಣಿನ ರಸ, ನಿಂಬೆ ರಸ ಮತ್ತು ಮೊಸರನ್ನು ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ 10 ನಿಮಿಷದ ಬಳಿಕ ತಣ್ಣೀರಿನಿಂದ ಮುಖ ತೊಳೆಯಿರಿ.

ಒಂದು ಚಮಚ ಕಿತ್ತಳೆ ಸಿಪ್ಪೆಯ ಪುಡಿಯನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಜೇನುತುಪ್ಪ ಸೇರಿಸಿ. ಆ ಮಿಶ್ರಣ ಅನ್ನು ಮುಖಕ್ಕೆ ಹಾಗೂ ಕುತ್ತಿಗೆಗೆ ಹಚ್ಚಿಕೊಳ್ಳಿ. ಅರ್ಧ ಗಂಟೆಗಳ ನಂತರ ನೀರಿನಿಂದ ತೊಳೆಯಿರಿ.

ಮುಖವನ್ನು ಮೊಡವೆ, ಕಲೆ ರಹಿತ ಮಾಡಲು ಕಿತ್ತಳೆ ಸಿಪ್ಪೆಯನ್ನು ಪೇಸ್ಟ್ ಮಾಡಿ ಅದರೊಂದಿಗೆ ಓಟ್ಸ್ ಅನ್ನು ನುಣ್ಣಗೆ ಪುಡಿ ಮಾಡಿ ಅದನ್ನು ಹಾಲಿನೊಂದಿಗೆ ಮಿಶ್ರಣ ಮಾಡಿ ಮುಖಕ್ಕೆ ಸ್ಕ್ರಬ್ ಮಾಡುವುದರಿಂದ ಉತ್ತಮ ರಿಸಲ್ಟ್ ಪಡೆಯುತ್ತೀರ.

ಒಂದು ಚಮಚ ಕಿತ್ತಳೆ ಸಿಪ್ಪೆಯನ್ನು ಅಲೋವೆರಾ ಜೆಲ್ ಸೇರಿಸಿ. ಅದನ್ನು ಮಿಶ್ರಣ ಮಾಡಿ. ಮುಖಕ್ಕೆ ಹಚ್ಚಿಕೊಂಡು ಸ್ವಲ್ಪ ಸಮಯ ಮಸಾಜ್ ಮಾಡಿ. ಚರ್ಮದ ಮೇಲೆ ಸ್ವಲ್ಪ ಸಮಯ ಹಾಗೆ ಬಿಡಿ. ಅದರ ನಂತರ ಅದನ್ನು ನೀರಿನಿಂದ ತೊಳೆಯಿರಿ.

ಒಂದು ಚಮಚ ಕಿತ್ತಳೆ ಸಿಪ್ಪೆಯ ಪುಡಿಯಲ್ಲಿ ಮೊಸರನ್ನು ಮಿಶ್ರಣ ಮಾಡಿ. ಇದನ್ನು ಒಟ್ಟಿಗೆ ಬೆರೆಸಿ ಫೇಸ್ ಪ್ಯಾಕ್ ತಯಾರಿಸಿ. ಇದನ್ನು ಮುಖ ಮತ್ತು ಕುತ್ತಿಗೆಗೆ ಅನ್ವಯಿಸಿ. ಸ್ವಲ್ಪ ಸಮಯದ ನಂತರ ನೀರಿನಿಂದ ತೊಳೆಯಿರಿ. ಹೀಗೆ ಮಾಡುವುದರಿಂದ ತ್ವಚೆ ಕ್ರಮೇಣ ಕಲೆ ರಹಿತವಾಗಿ ಸೌಂದರ್ಯ ಹೆಚ್ಚುತ್ತದೆ.

 

See also  ಮಹಿಳೆಯರೇ ಜೀವನದ ಪ್ರತಿಯೊಂದು ಗೆಲುವುಗಳನ್ನು ಆನಂದಿಸಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

11034
Gayathri Gowda

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು