News Karnataka Kannada
Friday, April 19 2024
Cricket
ಅಂಕಣ

ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಇಲ್ಲಿದೆ ಸಲಹೆ

Here's a tip to enhance the beauty of the face
Photo Credit : Freepik

ಸಾಮಾನ್ಯವಾಗಿ ಯುವತಿಯರು ಮುಖದ ಸೌಂದರ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾರೆ. ತ್ವಚೆ ಕಲೆ ರಹಿತವಾಗಿರಬೇಕು, ಮುಖ ಹೊಳೆಯುತ್ತಿರಬೇಕು ಎಂದು ಎಲ್ಲರ ಇಚ್ಛೆಯಾಗಿರುತ್ತದೆ. ಅಂತವರಿಗೆ ಕೆಲವೊಂದು ಬ್ಯೂಟಿ ಟಿಪ್ಸ್ ಇಲ್ಲಿದೆ ನೋಡಿ. ಕ್ಯಾರೆಟ್ ಬಗ್ಗೆ ನಾವೆಲ್ಲರೂ ತಿಳಿದುಕೊಂಡಿದ್ದೇವೆ. ಆರೋಗ್ಯದ ದೃಷ್ಟಿಯಿಂದಲೂ ಕ್ಯಾರೆಟ್ ಸಹಕಾರಿ ಅದೇ ರೀತಿಯಲ್ಲಿ ಸೌಂದರ್ಯ ವೃದ್ಧಿ ಮಾಡಲು ಇದು ಸಹಕಾರಿಯಾಗಿದೆ. ಹಾಗಾದರೆ ಇಂದು ನಾವು ಕ್ಯಾರೆಟ್ ನಿಂದ ಸೌಂದರ್ಯ ವೃದ್ಧಿ ಹೇಗೆ ಮಾಡಿಕೊಳ್ಳಬಹುದು ಎಂದು ತಿಳಿದುಕೊಳ್ಳೋಣ. ಕ್ಯಾರೆಟ್ ಫೇಸ್ ಪ್ಯಾಕ್ ಮಾಡಲು ಮೊದಲಿಗೆ ಒಂದು ಅಥವಾ ಎರಡು ಕ್ಯಾರೆಟ್ ಅನ್ನು ನೀರಿನಲ್ಲಿ ಹಾಕಿ ಚೆನ್ನಾಗಿ ಬೇಯಿಸಿಕೊಂಡು, ನಂತರ ಜಜ್ಜಿಕೊಂಡು ಸ್ವಲ್ಪ ಬಾದಾಮಿ ತೈಲವನ್ನು ಹಾಕಿ ಮಿಶ್ರಣ ಮಾಡಿ ಸ್ವಲ್ಪ ಹೊತ್ತು ಹಾಗೆಯೇ ಬಿಡಿ ನಂತರ ಮುಖ ಮತ್ತು ಕುತ್ತಿಗೆ ಭಾಗಕ್ಕೆ ಹಚ್ಚಿ ಒಣಗಲು ಬಿಡಿ. ತದನಂತರ ಬಿಸಿ ನೀರಿನಿಂದ ಸ್ವಚ್ಛ ಮಾಡಿಕೊಳ್ಳಿ. ಹೀಗೆ ಮಾಡುವುದರಿಂದ ಮುಖದ ಕಾಂತಿ ಹೆಚ್ಚಾಗುತ್ತದೆ.

ಚರ್ಮದ ಕಾಂತಿ ಹೆಚ್ಚಿಸಲು ಕ್ಯಾರೆಟ್ ತುರಿ, ಓಟ್ಸ್ ರವೆ, ಸೇಬುಹಣ್ಣಿನ ತಿರುಳಿನ ತುರಿಯನ್ನು ಬೆರೆಸಿ ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ ಮಸಾಜ್ ಮಾಡಿ, ಸ್ವಲ್ಪ ಸಮಯ ಹಾಗೇ ಬಿಡಿ. ಬಳಿಕ ತಣ್ಣೀರಿನಿಂದ ತೊಳೆದುಕೊಂಡರೆ ಉತ್ತಮ ರಿಸಲ್ಟ್ ಪಡೆಯಬಹುದು.

ಜೇನುತುಪ್ಪ, ಕ್ಯಾರೆಟ್ ಮತ್ತು ನಿಂಬೆ ರಸದ ಫೇಸ್ ಪ್ಯಾಕ್ ಮಾಡಲು ಮೊದಲಿಗೆ ಈ ಮೂರು ಬಗೆಯನ್ನು ಮಿಶ್ರಣ ಮಾಡಿ ಪೇಸ್ಟ್ ತಯಾರಿಸಿಕೊಂಡು ಮುಖಕ್ಕೆ ಹಚ್ಚಿಕೊಳ್ಳಿ ಸ್ವಲ್ಪ ಸಮಯ ಹಾಗೆ ಬಿಟ್ಟು ಮುಖವನ್ನು ಬಿಸಿ ನೀರಿನಿಂದ ತೊಳೆದರೆ ತ್ವಚೆಯ ಅಂದ ಹೆಚ್ಚುತ್ತದೆ.

ತುರಿದ ಕ್ಯಾರೆಟ್, ಹಾಲು, ಅಕ್ಕಿ ಹಿಟ್ಟು, ಜೇನುತುಪ್ಪ ಮತ್ತು ಅರಶಿನ ಇವೆಲ್ಲವನ್ನು ಅಂದಾಜು ಪ್ರಮಾಣದಲ್ಲಿ ತೆಗೆದುಕೊಂಡು ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ ಸ್ಪಲ್ಪ ಸಮಯ ಹಾಗೆ ಬಿಟ್ಟು ತೊಳೆದುಕೊಳ್ಳಿ. ಹೀಗೆ ಕ್ರಮೇಣ ಮಾಡಿದರೆ ಮುಖದ ಸೌಂದರ್ಯ ವೃದ್ಧಿಯಾಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11034
Gayathri Gowda

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು