News Kannada
Sunday, January 29 2023

ನುಡಿಚಿತ್ರ

ಮೈಸೂರಿನ ಗೊಮ್ಮಟೇಶ್ವರನಿಗೆ ಮಹಾಮಸ್ತಕಾಭಿಷೇಕ

Photo Credit :

ಮೈಸೂರಿನ ಗೊಮ್ಮಟೇಶ್ವರನಿಗೆ ಮಹಾಮಸ್ತಕಾಭಿಷೇಕ

ಶ್ರವಣಬೆಳಗೊಳದಲ್ಲಿರುವ ಗೊಮ್ಮಟೇಶ್ವರನ ಬಗ್ಗೆ ಎಲ್ಲರಿಗೂ ಗೊತ್ತಿದೆ. ಆದರೆ ಮೈಸೂರು ಜಿಲ್ಲೆಯಲ್ಲೂ ಅಂತಹದ್ದೇ ಒಂದು ಗೊಮ್ಮಟೇಶ್ವರ ವೀರಾಜಮಾನನಾಗಿ ಕಂಗೊಳಿಸುತ್ತಾ ಭಕ್ತರ ಮನತಣಿಸುತ್ತಿರುವ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ ಎನ್ನಬೇಕು.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಗೆ  ಸೇರಲ್ಪಡುವ ಬೆಟ್ಟದೂರು ಗ್ರಾಮ ಪಂಚಾಯಿತಿಗೆ ಸೇರುವ ಶ್ರೀ ಗೊಮ್ಮಟಗಿರಿ ಬೆಟ್ಟದಲ್ಲಿ ನೆಲೆ ನಿಂತಿರುವ ಗೊಮ್ಮಟೇಶ್ವರ  ಜೈನರ ಆರಾಧ್ಯ ದೈವನಾಗಿ ಪೂಜಿಸಲ್ಪಡುತ್ತಾ ಭಕ್ತರ ಸೆಳೆಯುತ್ತಿದ್ದಾನೆ.
ಭಾನುವಾರ ಈ ಗೊಮ್ಮಟೇಶ್ವರನಿಗೆ 67ನೇ ವರ್ಷದ ಮಹಾಮಸ್ತಕಾಭಿಷೇಕ ನೆರವೇರಿದೆ. 108 ಪೂರ್ಣ ಕಳಸಗಳ ಅಭಿಷೇಕ, 5 ಕುಂಭ ಕಳಸಗಳ ಅಭಿಷೇಕ ಮುಗಿದ ಬಳಿಕ ಪಂಚಾಮೃತ ಅಭಿಷೇಕ, ಇದಾದ ನಂತರ ಗೊಮ್ಮಟೇಶ್ವರನಿಗೆ ಶ್ರೀಗಂಧ, ಅರಿಸಿನ, ಕುಂಕುಮ, ಹಾಲು, ಜೇನು ತುಪ್ಪ ಹಾಗೂ ಇನ್ನಿತರೆ ದ್ರವ್ಯಗಳಿಂದ ಮಹಾಮಜ್ಜನ ಕಾರ್ಯ ನಡೆಯಿತು.

ಈ ತಾಣ ಶ್ರವಣಬೆಳಗೊಳದಂತೆ ಪ್ರಖ್ಯಾತ ಹೊಂದಿಲ್ಲದಿದ್ದರೂ ಪ್ರವಾಸಿ ತಾಣವಾಗಿ ಪ್ರವಾಸಿಗರನ್ನು ತನ್ನತ್ತ ಸೆಳೆಯುವಲ್ಲಿ ಹಿಂದೆ ಬಿದ್ದಿಲ್ಲ. ಈ ತಾಣದ ಇತಿಹಾಸವನ್ನು ನಾವು ಗಮನಿಸುವುದಾದರೆ ಇಲ್ಲಿರುವ ಗೊಮ್ಮಟೇಶ್ವರ ಮಗೆ ಸುಮಾರು ಎಂಟು ಶತಮಾನಗಳ ಇತಿಹಾಸ ಇದೆ ಎನ್ನಲಾಗುತ್ತಿದೆ. ಸುಮಾರು ಇನ್ನೂರು ಅಡಿ ಎತ್ತರ, ಇನ್ನೂರೈವತ್ತು ಅಡಿ ಅಗಲದ ಹೆಬ್ಬಂಡೆಯಲ್ಲಿ ಹದಿನಾರು ಅಡಿ ಎತ್ತರದ ಏಕಶಿಲೆಯಲ್ಲಿ ಗೊಮ್ಮಟೇಶ್ವರನನ್ನು ಕೆತ್ತಲಾಗಿದೆ. ಈ ಮೂರ್ತಿಯನ್ನು ತಲುಪಬೇಕಾದರೆ ಹೆಬ್ಬಂಡೆಯ ಸುಮಾರು ತೊಂಬತ್ತು ಮೆಟ್ಟಿಲನ್ನು ಹತ್ತಿ ಸಾಗಬೇಕು. ಹೀಗೆ ಸಾಗಿದ ಮೇಲೆ ಹತ್ತಿರದಿಂದ ಕಾಣುವ ಗೊಮ್ಮಟೇಶ್ವರನ ಮೂರ್ತಿ ನಿಜಕ್ಕೂ ನೋಡುಗರ ಆಯಾಸವನ್ನು ತಣಿಸಿ ಮನಸ್ಸು ಪ್ರಶಾಂತಗೊಳಿಸುತ್ತದೆ.

ಇನ್ನು ಈ ಗೊಮ್ಮಟೇಶ್ವರನ ನಿರ್ಮಾಣದ ಕುರಿತಂತೆ ಯಾವುದೇ ಶಾಸನಗಳು ಲಭ್ಯವಾಗಿಲ್ಲ. ಹೀಗಾಗಿ ಕೆಲವರು ವಿಜಯನಗರ ಸಾಮ್ರಾಜ್ಯದ ಆಳ್ವಿಕೆಯ ಸಂದರ್ಭದಲ್ಲಿ ಈ ಭಾಗದಲ್ಲಿದ್ದ ಗಂಗರಸರು ಈ ಮೂರ್ತಿಯನ್ನು ನಿರ್ಮಿಸಿರಬಹುದೆಂದು ಹೇಳಿದರೆ ಮತ್ತೆ ಕೆಲವರು ಶ್ರವಣಬೆಳಗೊಳದ ಗೊಮ್ಮಟೇಶ್ವರನ ಮೂತರ್ಿ ಕೆತ್ತಿದ ಚಾವುಂಡರಾಯನೇ ಇದನ್ನು ಕೆತ್ತಿರಬಹುದೆಂದು ಹೇಳುತ್ತಾರೆ. ಇನ್ನು ಇಲ್ಲಿಗೆ ಸಮೀಪವಿರುವ ರಟ್ನಳ್ಳಿ ಬ್ರಹ್ಮದೇವರ ದೇವಾಲಯಕ್ಕೂ ಇಲ್ಲಿಗೆ ಸಂಬಂಧವಿದೆ ಎಂದು ಜನ ಮಾತಾಡಿಕೊಳ್ಳುತ್ತಾರೆ. ಅದೇನೇ ಇರಲಿ. ಜೈನತೀರ್ಥಂಕರರ ಸಂಪ್ರದಾಯಿಕ ಚಿಹ್ನೆಯಾದ ಹಾವು ಬಾಹುಬಲಿಯ ಪಾದತಳದಿಂದ ಮುಡಿಯವರೆಗೆ ಆವರಿಸಿದೆ. ಕಪ್ಪು ಶಿಲೆಯಿಂದ ಕೆತ್ತಲ್ಪಟ್ಟಿರುವ  ಮೂರ್ತಿ ಆಕರ್ಷಕವಾಗಿದೆ.
ಇಲ್ಲಿನ ಬೆಟ್ಟದ ತಪ್ಪಲಿನ ಬಲಭಾಗದಲ್ಲಿ ವರ್ಧಮಾನ ಕಾಲದ 24 ಜೈನ ತೀರ್ಥಂಕರರ ಕೂಟಗಳು ಎಡಭಾಗದಲ್ಲಿ ಕುಂದಾಚಾರ್ಯರ ದ್ವಿಸಹಸ್ರಾಬ್ದಿ ಜ್ಞಾಪಕಾರ್ಥವಾಗಿ ನಿರ್ಮಿಸಿರುವ ಪಾದ ಕೂಟ, ಹಾಗೂ ಪಕ್ಕದಲ್ಲೇ ಜಲಮಂದಿರವನ್ನು ಕಾಣಬಹುದಾಗಿದೆ.

ಸರ್ಕಾರ ಈ ತಾಣವನ್ನು ಅಭಿವೃದ್ಧಿ ಮಾಡಿದ್ದೇ ಆದರೆ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರನ್ನು ಸೆಳೆಯಬಹುದಾಗಿದೆ. ಕಾರಣ ಇಲ್ಲಿನ ಪ್ರಕೃತಿ ಸೌಂದರ್ಯ ತಾಣಕ್ಕೆ ಮೆರಗು ನೀಡುತ್ತದೆ. ಒಂದೆಡೆ ಅರಬ್ಬಿ ತಿಟ್ಟು ಅರಣ್ಯದ ಹಸಿರು ಹಚ್ಚಡ ಮತ್ತೊಂದೆಡೆ ಕೆಆರ್ಎಸ್ ಜಲಾಶಯದ ಹಿನ್ನೀರ ನೋಟ ನಿಸರ್ಗಪ್ರೇಮಿಯೊಬ್ಬ ಕುಣಿದು ಕುಪ್ಪಳಿಸಲು ಇದಕ್ಕಿಂತ ಇನ್ನೇನು ಬೇಕು ?
ದೇವರಾಜ ಅರಸರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಗೊಮ್ಮಟಗಿರಿಯನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಕ್ರಮ ಕೈಗೊಂಡಿದ್ದರು. ಈ ತಾಣವನ್ನು ಪ್ರವಾಸೋದ್ಯಮ ಕ್ಷೇತ್ರವನ್ನಾಗಿ ಮಾರ್ಪಡಿಸಲು ಅರಣ್ಯ ಇಲಾಖೆಗೆ 25 ಎಕರೆ ಭೂಮಿ ನೀಡುವಂತೆಯೂ ಸೂಚಿಸಿದ್ದರು ಎನ್ನಲಾಗಿದೆ. ಆದರೆ ಅವರ ಆಶಯ ಇನ್ನೂ ಈಡೇರಿಲ್ಲ. ಸರ್ಕಾರ ಗಮನಹರಿಸಿದ್ದೇ ಆದಲ್ಲಿ ಗೊಮ್ಮಟೇಶ್ವರ ಕ್ಷೇತ್ರ ಸುಂದರ ಪ್ರವಾಸಿ ತಾಣವಾಗುವುದರಲ್ಲಿ ಸಂಶಯವಿಲ್ಲ.

See also  ಮೈಸೂರಿನ ಮಹದೇವಪುರದಲ್ಲೊಂದು ಕನಕ ದೇಗುಲ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು