ಮೈಸೂರು: ದಕ್ಷಿಣ ಕಾಶಿ ಎಂದು ಪ್ರಖ್ಯಾತವಾಗಿರುವ ನಂಜನಗೂಡಿನಲ್ಲಿ ಇಂದು ಮುಂಜಾನೆ 5.20ರಿಂದ 6.20ರ ಮಖಾ ನಕ್ಷತ್ರದ ಮೀನ ಲಗ್ನದಲ್ಲಿ ಪಂಚ ರಥೋತ್ಸವಕ್ಕೆ ಲಕ್ಷಾಂತರ ಭಕ್ತಾದಿಗಳ ಸಮ್ಮುಖದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ಇಂದು ಬೆಳಿಗ್ಗೆ ಗೌತಮ, ಪಾರ್ವತಿದೇವಿ, ಗಣಪತಿ, ಸುಬ್ರಹ್ಮಣ್ಯೇಶ್ವರ, ಚಂಡಿಕೇಶ್ವರ ದೇವರುಗಳ ಉತ್ಸವ ಮೂರ್ತಿಗಳ ಮೆರವಣಿಗೆ ನಡೆಯಿತು. 89 ಅಡಿ ಎತ್ತರದ ಅಲಂಕೃತ ಗೌತಮ ರಥ ಶ್ರೀಕಂಠೇಶ್ವರ ಜಾತ್ರೆಯ ಕೇಂದ್ರ ಬಿಂದುವಾಗಿದ್ದು 100 ಟನ್ ತೂಕದ ರಥ ಎಳೆಯಲು 240 ಅಡಿ ಉದ್ದದ ಹಗ್ಗವನ್ನು ಬಳಕೆ ಮಾಡಲಾಗಿದೆ.
ಇದೇ ಮೊದಲ ಬಾರಿಗೆ ರಥೋತ್ಸವದಲ್ಲಿ ಭಾಗವಹಿಸುವ 112 ಸಿಬ್ಬಂದಿಗಳಿಗೆ ಮುಜರಾಯಿ ಇಲಾಖೆಯಿಂದ ಇದೇ ಪ್ರಥಮಬಾರಿಗೆ ವಿಮಾ ಸೌಲಭ್ಯ ಕಲ್ಪಿಸಲಾಗಿದೆ. ಸುಮಾರು 89 ಅಡಿ ಎತ್ತರದ ಅಲಂಕೃತ ಗೌತಮ ರಥದಲ್ಲಿ ಶ್ರೀಕಂಠೇಶ್ವರ ಕಂಗೊಳಿಸುತ್ತಿದ್ದು ಪುಣ್ಯಸ್ನಾನಕ್ಕೆ ಬರುವ ಭಕ್ತರಿಗಾಗಿ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ.
ಬಿಗಿ ಪೊಲೀಸ್ ಬಂದೂ ಬಸ್ತ್:
ಹೊರ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಈ ರಥೋತ್ಸವದಲ್ಲಿ ಬಾಗವಹಸುವುದರಿಂದ ಬಿಗಿ ಪೊಲೀಸ್ ಬಂದೂಬಸ್ತ್ ಏರ್ಪಡಿಸಲಾಗಿದ್ದು, ತಾತ್ಕಾಲಿಕವಾಗಿ 35 ಸಿಸಿ ಕ್ಯಾಮರಾ, 7 ಮೊಬೈಲ್ ವಾಚ್ ಟವರ್ ಬಂದು ಹೋಗುವ ಜನರ ಮೇಲೆ ಕಣ್ಣಿರಿಸಲಿದೆ. ಅತ್ಯಂತ ಬಿಗು ಬಂದೋಬಸ್ತ್ ನಲ್ಲಿ ಜಾತ್ರಾ ಮಹೋತ್ಸವ ನಡೆಯುತ್ತಿದೆ. ವಿಶೇಷ ಕ್ರಮ ವಹಿಸಿರುವ ಜಿಲ್ಲಾ ಪೊಲೀಸರು ಹದ್ದಿನ ಕಣ್ಣಿರಿಸಿದ್ದಾರೆ.