ಮೈಸೂರು: ವರುಣಾ ವಿಧಾನಸಭಾ ಕ್ಷೇತ್ರದ ಕೆಂಪಿಸಿದ್ದನಹುಂಡಿ ಸ್ಯಾಂಡಲ್ ವುಡ್ ಮೋಹಕ ತಾರೆ ರಮ್ಯಾ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಪರ ಭರ್ಜರಿ ಚುನಾವಣಾ ಪ್ರಚಾರ ನಡೆಸಿದರು.
ಕೆಂಪಿಸಿದ್ದನ ಹುಂಡಿ, ಇಮ್ಮಾವು, ಹುಳಿಮಾವು, ಬೊಕ್ಕಹಳ್ಳಿ, ಹೊಸಕೋಟೆ, ಸುತ್ತೂರು, ಬಿಳಿಗೆರೆ, ನಗರ್ಲೆ ಗ್ರಾಮಗಳಲ್ಲಿ ಸಿದ್ದರಾಮಯ್ಯ ಅವರ ಜೊತೆ ನಟಿ ರಮ್ಯಾ ಬಿರುಸಿನ ಮತಯಾಚನೆ ಮಾಡಿದರು.
ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ರಮ್ಯ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿದಿದ್ದರು.