ಕೊರೋನಾದಿಂದ ರಿಲೀಸ್ ಡೇಟ್ ಗಳನ್ನು ಮುಂದಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಬಹು ನಿರೀಕ್ಷಿತ ಭಜರಂಗಿ 2 ಸಿನಿಮಾದ ರಿಲೀಸ್ ಡೇಟ್ ಘೋಷಣೆ ಮಾಡಲಾಗಿದೆ.
ಎ. ಹರ್ಷ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ‘ಭಜರಂಗಿ 2’ ಮುಂದಿನ ತಿಂಗಳು ಅಕ್ಟೋಬರ್ 29ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.
ಈ ಚಿತ್ರದಲ್ಲಿ ಶಿವರಾಜ್ ಕುಮಾರ್ ವಿಭಿನ್ನ ಲುಕ್ ನಲ್ಲಿ ಕಾಣಲಿದ್ದು, ಅಭಿಮಾನಿಗಳನ್ನು ತಮ್ಮ ಗೆಟಪ್ ನಿಂದಲೇ ಗೆದ್ದುಬಿಟ್ಟಿದ್ದಾರೆ. ಈಗಾಗಲೇ ಈ ಸಿನಿಮಾದ ಫಸ್ಟ್ ಲುಕ್ ಹಾಗೂ ಟೀಸರ್ ಬಿಡುಗಡೆ ಮಾಡಿದ್ದ ಚಿತ್ರರಂಡ ಈಗ ರಿಲೀಸ್ ಡೇಟ್ ತಿಳಿಸಿ ಅಭಿಮಾನಿಗಳ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.
ಈ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಲಿದ್ದು, ಜಯಣ್ಣ- ಭೋಗೇಂದ್ರ ತಮ್ಮ ಜಯಣ್ಣ ಫಿಲ್ಮ್ಸ್ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.