NewsKarnataka
Thursday, January 27 2022

ಸಾಂಡಲ್ ವುಡ್

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ ಹಸೆಮಣೆಗೆ

ಬೆಂಗಳೂರು: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ ತಮ್ಮ ಬಹುಕಾಲದ ಗೆಳತಿ ಅಖಿಲಾ ಜೊತೆಗೆ ಹಸೆಮಣೆಯೇರಿದ್ದಾರೆ.

ಜುಲೈ 4ರಂದು ಬೆಂಗಳೂರಿನಲ್ಲಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಈ ಜೋಡಿ, ಇಂದು ಕನಕಪುರ ರಸ್ತೆಯ ತಲಘಟ್ಟಪುರ ಬಳಿ ಇರುವ ಶಿಬ್ರಾವ್ಯಿ ಕೋರ್ಟ್ ಯಾರ್ಡ್‍ನಲ್ಲಿ ಸಪ್ತಪದಿ ತುಳಿದಿದೆ. ಕೋವಿಡ್ ನಿಮಯಗಳನ್ನು ಅನುಸರಿಸಿ, ಈ ಮದುವೆ ಮಾಡಲಾಗಿದೆ.

2014ರಲ್ಲಿ ಮಂಸೋರೆ ಅವರು ಮೊದಲು ನಿರ್ದೇಶಿಸಿದ ಹರಿವು ಚಿತ್ರಕ್ಕೆ ಉತ್ತಮ ಪ್ರಾದೇಶಿಕ ಚಿತ್ರ ರಾಷ್ಟ್ರಪ್ರಶಸ್ತಿ ಬಂದಿತ್ತು. ಹರಿವು ಚಿತ್ರದಲ್ಲಿ ಸಂಚಾರಿ ವಿಜಯ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದರು. ಮಂಸೋರೆ ನಿರ್ದೇಶನದಲ್ಲಿ, ಶೃತಿ ಹರಿಹರನ್ ಮತ್ತು ಸಂಚಾರಿ ವಿಜಯ್ ನಟಿಸಿದ್ದರು.

2018ರಲ್ಲಿ ಬಿಡುಗಡೆಯಾಗಿದ್ದ ನಾತಿಚರಾಮಿ ಚಿತ್ರಕ್ಕೆ ಉತ್ತಮ ಪ್ರಾದೇಶಿಕ ಚಿತ್ರ ರಾಷ್ಟ್ರಪ್ರಶಸ್ತಿ, ಮಂಸೋರೆ ಅವರಿಗೆ ಉತ್ತಮ ಸಾಹಿತ್ಯಕ್ಕೆ ರಾಷ್ಟ್ರಪ್ರಶಸ್ತಿ ಮತ್ತು ಇತರೆ ಮೂರು ವಿಭಾಗಗಳಲ್ಲಿ ರಾಷ್ಟ್ರಪ್ರಶಸ್ತಿ ಗೌರವ ಸಿಕ್ಕಿತ್ತು. ಅದೇ ಚಿತ್ರದ ನಿರ್ದೇಶನಕ್ಕಾಗಿ ಮಂಸೋರೆ ಅವರಿಗೆ ಉತ್ತಮ ನಿರ್ದೇಶಕ ಫಿಲ್ಮ್ ಫೇರ್ ಪ್ರಶಸ್ತಿಯ ಗರಿ ಸಿಕ್ಕಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.