News Kannada
Wednesday, October 05 2022

ಸಾಂಡಲ್ ವುಡ್

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ ರಾಜಕೀಯ ಧುರೀಣರು - 1 min read

Photo Credit :

ಬೆಂಗಳೂರು, ಅಕ್ಟೋಬರ್ 29 : ಚಂದನವನದ ಪಾಲಿಗೆ ಇಂದು ಕರಾಳ ಶುಕ್ರವಾರ. ಕನ್ನಡಿಗರ ಅಚ್ಚುಮೆಚ್ಚಿನ ಅಪ್ಪು ಲಘು ಹೃದಯಾಘಾತದಿಂದ ಉಸಿರು ಚೆಲ್ಲಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ರಾಜಕೀಯ ಧುರೀಣರು ಸಂತಾಪ ಸೂಚಿಸಿದ್ದಾರೆ.

“ಕನ್ನಡ ಚಿತ್ರ ರಂಗದ ಖ್ಯಾತ ಚಿತ್ರನಟ ಯುವರತ್ನ ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತ ವಾಗಿದೆ. ಅವರ ನಟಿಸ್ಸಿದ್ದ ಪೃತ್ವಿ ಮತ್ತು ರಾಜಕುಮಾರ ಚಿತ್ರವನ್ನು ಅಪ್ಪು ಅವರ ಜೊತೆಯಲ್ಲೇ ನೋಡಿದ್ದೇ ಈ ದಿನ ಅವರಿಲ್ಲ ಎಂದರೆ ನಂಬಲಸಾಧ್ಯವಾಗಿದೆ. ಈ ದಿನ ಯುವರತ್ನನನ್ನು ಕಳೆದುಕೊಂಡು ನಮ್ಮ ಕರುನಾಡು ಬರಿದಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ದೇವರು ಅವರ ಕುಟುಂಬ ವರ್ಗಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ದುಃಖ ಬರಿಸುವ ಶಕ್ತಿ ತುಂಬಲಿ, ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಟ್ವೀಟ್ ಮಾಡಿದ್ದಾರೆ.

ಸಿದ್ದರಾಮಯ್ಯ ಟ್ವೀಟ್:

ಕನ್ನಡದ ಪ್ರತಿಭಾವಂತ ಯುವ ನಟ ಪುನೀತ್ ರಾಜಕುಮಾರ್ ಹಠಾತ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ನಟನಾ ಕೌಶಲದ ಜೊತೆ ಸರಳ-ಸಜ್ಜನಿಕೆಯ ನಡವಳಿಕೆಯಿಂದಲೂ ಕನ್ನಡಿಗರ ಮ‌ನೆ ಮಗನಂತಿದ್ದ ಪುನೀತ್ ಸಾವು ತುಂಬಿಬಾರದ ನಷ್ಟ. ರಾಜ್ ಕುಮಾರ್ ಕಾಲದಿಂದಲೂ ಅವರ ಕುಟುಂಬದ ಜೊತೆಯಲ್ಲಿ ಆತ್ಮೀಯ ಸಂಬಂಧ ಹೊಂದಿದ್ದ ನನ್ನ ಪಾಲಿಗೆ ಪುನೀತ್ ಸಾವು ಮನೆ ಸದಸ್ಯನೊಬ್ಬನನ್ನು ಕಳೆದುಕೊಂಡ ಶೋಕ. ಪುನೀತ್ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ, ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಪುನೀತ್ ರಾಜಕುಮಾರ್ ನಿಧನಕ್ಕೆ ಡಿಕೆಶಿ ಕಂಬನಿ:

ನನ್ನ ನೆರೆಹೊರೆಯವರಾದ, ಸ್ವಂತ ಸಹೋದರನಂತಿದ್ದ ಪುನೀತ್ ಇನ್ನಿಲ್ಲ ಎಂಬ ಸುದ್ದಿಯನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಇಷ್ಟು ಚಿಕ್ಕವಯಸ್ಸಿನಲ್ಲಿ ಅವರನ್ನು ಕೊಂಡೋಯ್ದ ವಿಧಿ ಬಹಳ ಕ್ರೂರಿ ಎಂದು ಶಿವಕುಮಾರ್ ಅವರು ಕಂಬನಿ ಮಿಡಿದಿದ್ದಾರೆ. ಪುನೀತ್ ಅವರು ನನಗೆ ಆತ್ಮೀಯರಾಗಿದ್ದರು. ಕುಟುಂಬದ ಸ್ನೇಹಿತರಾಗಿದ್ದರು. ನಮ್ಮಿಬ್ಬರ ಕುಟುಂಬ ಸದಸ್ಯರ ನಡುವೆ ಉತ್ತಮ ಒಡನಾಟವಿತ್ತು ಎಂದು ಹೇಳಿಕೆಯಲ್ಲಿ ಸ್ಮರಿಸಿಕೊಂಡಿದ್ದಾರೆ.

ನಾವಿಬ್ಬರೂ ಒಟ್ಟಿಗೆ ವಾಕಿಂಗ್ ಮಾಡಿದ್ದೇವೆ. ಜಿಮ್ ಮಾಡಿದ್ದೇವೆ. ಚಿತ್ರರಂಗ ಸೇರಿ ಅನೇಕ ವಿಚಾರಗಳನ್ನು ಚರ್ಚೆ ಮಾಡಿದ್ದೇವೆ. ಶಿಸ್ತುಬದ್ಧ ಜೀವನ, ಕಟ್ಟುನಿಟ್ಟಿನ ವ್ಯಾಯಾಮದ ಮೂಲಕ ಪುನೀತ್ ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದರು. ಫಿಟ್ನೆಸ್ ವಿಚಾರವಾಗಿ ಯುವಕರಿಗೆ ರೋಲ್ ಮಾಡೆಲ್ ಆಗಿದ್ದರು. ಅಂತಹವರನ್ನು ಭಗವಂತ ಇಷ್ಟು ಬೇಗ ಕರೆಸಿಕೊಳ್ಳುತ್ತಾನೆ ಎಂದು ಕನಸಿನಲ್ಲಿಯೂ ಊಹಿಸಿರಲಿಲ್ಲ ಎಂದು ಶಿವಕುಮಾರ್ ಅವರು ತೀವ್ರ ನೋವು ವ್ಯಕ್ತಪಡಿಸಿದ್ದಾರೆ.

6 ತಿಂಗಳ ಮಗುವಾಗಿದ್ದಾಗಿನಿಂದಲೇ (ಪ್ರೇಮದ ಕಾಣಿಕೆ) ರಾಜ್ ಕುಮಾರ್ ಅವರ ಚಿತ್ರಗಳಲ್ಲಿ ನಟಿಸಿದ್ದ ಪುನೀತ್, ನಂತರ ವಸಂತಾ ಗೀತಾ, ಚಲಿಸುವ ಮೋಡಗಳು, ಬೆಟ್ಟದ ಹೂವು ಸೇರಿದಂತೆ ಅನೇಕ ಚಿತ್ರಗಳಲ್ಲಿ ಬಾಲ ನಟರಾಗಿ ಮನಗೆದ್ದಿದ್ದರು. ಬೆಟ್ಟದ ಹೂವು ಚಿತ್ರದ ನಟನೆಗೆವರಾಷ್ಟ್ರ ಪ್ರಶಸ್ತಿ ಬಂದಿದಗದು ಮಾತ್ರವಲ್ಲದೇ, ತಂದೆಗೆ ತಕ್ಕ ಮಗನಂತೆ ಕೌಟುಂಬಿಕ ಚಿತ್ರಗಳಲ್ಲಿ ಅಭಿನಯಿಸಿ ಎಲ್ಲ ವರ್ಗದ ಜನರ ಅಭಿಮಾನ ಗಳಿಸಿದ ಧ್ರುವ ನಕ್ಷತ್ರ ಪುನೀತ್ ಅವರು. ಕನ್ನಡ ಪ್ರೇಕ್ಷಕರು ಮಾತ್ರವಲ್ಲದೆ ಅನ್ಯ ಭಾಷಿಕ ಪ್ರೇಕ್ಷಕರನ್ನು ತಮ್ಮ ಅಭಿಮಾನಿಯಾಗಿ ಮಾಡಿಕೊಂಡಿದ್ದು ಪುನೀತ್ ಅವರಲ್ಲಿದ್ದ ಕಲಾ ಶಕ್ತಿಗೆ ಸಾಕ್ಷಿ.

See also  ಹಿರಿಯ ನಟಿ ತಾರಾ ಅನುರಾಧ ಅವರ ತಾಯಿ ಪುಷ್ಪಾ ವಿಧಿವಶ

ನಾನು ರಾಜ್ ಕುಮಾರ್ ಚಿತ್ರಗಳನ್ನು ನೋಡುತ್ತಾ ಬೆಳೆದವನು. ಅದೇ ರೀತಿ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಪುನೀತ್ ಅವರ ಚಿತ್ರಗಳನ್ನು ನೋಡುತ್ತಾ ಬಂದಿದ್ದೇನೆ. ಒಬ್ಬರಿಗಿಂತ ಮತ್ತೊಬ್ಬರು ಮಿಗಿಲಾದ ನಟರು ಎಂದು ಮೆಲುಕು ಹಾಕಿದರು. ಪುನೀತ್ ಅವರ ಅಗಲಿಕೆ ಕೇವಲ ಚಿತ್ರರಂಗಕ್ಕಷ್ಟೇ ಅಲ್ಲ, ಇಡೀ ನಾಡಿಗೆ ತುಂಬಲಾರದ ನಷ್ಟ’ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು