News Kannada
Friday, March 31 2023

ಸಾಂಡಲ್ ವುಡ್

ಪುನೀತ್​ ರಾಜ್​ಕುಮಾರ್ ಕೊನೆಯ ಸಿನಿಮಾ ‘ಜೇಮ್ಸ್​’ನ ಲಿರಿಕಲ್​ ಸಾಂಗ್​​, ‘ಟ್ರೇಡ್​ಮಾರ್ಕ್​..’ ಇಂದು ರಿಲೀಸ್!

Photo Credit :

ಪುನೀತ್​ ರಾಜ್​ಕುಮಾರ್ ಅಭಿಮಾನಿಗಳಿಗೆ ಇಂದು ವಿಶೇಷ ದಿನ. ಅವರು ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ ‘ಜೇಮ್ಸ್​’ನ ಲಿರಿಕಲ್​ ಸಾಂಗ್​​, ‘ಟ್ರೇಡ್​ಮಾರ್ಕ್​..’ ಬೆಳಗ್ಗೆ 11:11ಕ್ಕೆ ರಿಲೀಸ್​ ಆಗುತ್ತಿದೆ.

ಈ ವಿಚಾರವನ್ನು ಈ ಮೊದಲು ಚಿತ್ರತಂಡ ಘೋಷಣೆ ಮಾಡಿತ್ತು. ಹೀಗಾಗಿ, ಅಭಿಮಾನಿಗಳು ಈ ಸಾಂಗ್​ ಕೇಳೋಕೆ ಕಾದು ಕೂತಿದ್ದಾರೆ. ಈಗಾಗಲೇ ಟೀಸರ್​ ಮೂಲಕ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈಗ ಚಿತ್ರದ ಹಾಡು ಹೇಗಿರಲಿದೆ ಎಂಬುದನ್ನು ನೋಡೋಕೆ ಅಭಿಮಾನಿಗಳು ಕಾದಿದ್ದಾರೆ.

ಲಿರಿಕಲ್​ ಸಾಂಗ್​ ರಿಲೀಸ್ ಮಾಡುವಾಗ ಅದಕ್ಕೊಂದು ಸಿದ್ಧಸೂತ್ರವಿದೆ. ಸಿನಿಮಾದ ಸ್ಟಿಲ್​ಗಳನ್ನು ಹಾಕಿ, ಬ್ಯಾಕ್​ಗ್ರೌಂಡ್​ನಲ್ಲಿ ಸಾಂಗ್​ ಹಾಕಲಾಗುತ್ತದೆ. ಬಹುತೇಕರು ಹೀಗೆಯೇ ಮಾಡುತ್ತಾರೆ. ಆದರೆ, ‘ಟ್ರೇಡ್​ಮಾರ್ಕ್​’ ಲಿರಿಕಲ್​ ಸಾಂಗ್​ ಆ ರೀತಿಯಲ್ಲಿ ಇರುವುದಿಲ್ಲ ಎಂಬುದನ್ನು ಇತ್ತೀಚೆಗೆ ಚೇತನ್​ ಕುಮಾರ್ ಹೇಳಿದ್ದರು.

‘ಟ್ರೇಡ್​ಮಾರ್ಕ್​ ಸಾಂಗ್​ಅನ್ನು 5 ಗಾಯಕರು ಹಾಡಿದ್ದಾರೆ. ಫೋಟೋ ಮೇಲೆ ಲಿರಿಕ್ಸ್​ ಹಾಕಿ ರಿಲೀಸ್​ ಮಾಡುವ ಹಾಗೆ ರೆಗ್ಯುಲರ್​ ಆಗಿ ಇದನ್ನು ಬಿಡುಗಡೆ ಮಾಡಲ್ಲ. ತುಂಬ ವಿಶೇಷವಾದ ಕಲಾವಿದರು ಇದರಲ್ಲಿ ಪರ್ಫಾರ್ಮ್​ ಮಾಡಿದ್ದಾರೆ. ಅದರ ಜೊತೆಗೆ ಮೇಕಿಂಗ್​ ವಿಡಿಯೋ ಕೂಡ ಇರಲಿದೆ.

ಮಾ.1ರಂದು ಎಲ್ಲ ಮಾಹಿತಿ ತಿಳಿಯಲಿದೆ. ಇದು ಪವರ್​ಫುಲ್​ ರ‍್ಯಾಪ್​ ಸಾಂಗ್​. ಅಭಿಮಾನಿಗಳಿಗೆ ಇದು ಹೆಚ್ಚು ಇಷ್ಟ ಆಗಲಿದೆ’ ಎಂದಿದ್ದರು. ಈ ಕಾರಣಕ್ಕೂ ಹಾಡಿನ ಬಗ್ಗೆ ನಿರೀಕ್ಷೆ ಹುಟ್ಟಿದೆ. ಇಂದು ಬಿಡುಗಡೆ ಆಗೋ ಸಾಂಗ್​ ಹೇಗಿರಲಿದೆ ಎಂಬುದು ಸದ್ಯದ ಕುತೂಹಲ.

See also  ಪುನೀತ್ ಚಾರಿತ್ರ್ಯವೇ ಒಂದು ಚರಿತ್ರೆ - ಬಸವರಾಜ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು