News Kannada
Sunday, September 25 2022

ಸಾಂಡಲ್ ವುಡ್

ಪುನೀತ್ ರಾಜ್​ಕುಮಾರ್ ಅಭಿನಯದ ಜೇಮ್ಸ್’ ಚಿತ್ರದ ‘ಟ್ರೇಡ್​ಮಾರ್ಕ್’ ಹಾಡು ರಿಲೀಸ್ - 1 min read

Photo Credit :

ಇತ್ತೀಚೆಗಷ್ಟೇ ರಿಲೀಸ್ ಆಗಿದ್ದ ‘ಜೇಮ್ಸ್’ ಟೀಸರ್ ಹಾಗೂ ಪೋಸ್ಟರ್​​ಗಳು ಅಪಾರ ನಿರೀಕ್ಷೆ ಮೂಡಿಸಿದ್ದವು. ಇದೀಗ ಶಿವರಾತ್ರಿಯ ವಿಶೇಷ ಸಂದರ್ಭದಲ್ಲಿ  ‘ಜೇಮ್ಸ್’ ಚಿತ್ರದ ಹಾಡೊಂದನ್ನು ಚಿತ್ರತಂಡ ರಿಲೀಸ್ ಮಾಡಿದೆ.

ಬಹಳ ಭಿನ್ನವಾದ ಅಪ್ಪುವಿನ ‘ಟ್ರೇಡ್​ಮಾರ್ಕ್’  ಇರುವ ಹಾಡಿದು. ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿಯೇ ಹಾಡು ಅಪಾರ ವೀಕ್ಷಣೆ ಗಳಿಸುತ್ತಿದ್ದು, ಅಭಿಮಾನಿಗಳ ಮನಸೂರೆಗೊಂಡಿದೆ. ಎಂಸಿ ವಿಕ್ಕಿ, ಅದಿತಿ ಸಾಗರ್, ಚಂದನ್ ಶೆಟ್ಟಿ, ಶರ್ಮಿಳಾ, ಯುವರಾಜ್​ಕುಮಾರ್ ಹಾಗೂ ಚರಣ್​ರಾಜ್ ಈ ಗೀತೆಯನ್ನು ಹಾಡಿದ್ದಾರೆ. ಚೇತನ್ ಕುಮಾರ್ ಬರೆದಿರುವ ಸಾಹಿತ್ಯಕ್ಕೆ ಚರಣ್​ರಾಜ್ ಸಂಗೀತ ಸಂಯೋಜಿಸಿದ್ದಾರೆ. ‘ಇದು ಕೇವಲ ಹಾಡಲ್ಲ, ಎಲ್ಲಾ ಅಭಿಮಾನಿಗಳ ದನಿಯಿದು’ ಎಂದು ಹಾಡಿನ ಪ್ರಾರಂಭದಲ್ಲೇ ಸಾಲುಗಳು ಬರುತ್ತವೆ. ಅದಕ್ಕೆ ತಕ್ಕಂತೆ ಹಾಡು ಕೂಡ ಮೂಡಿಬಂದಿದೆ.

ಪಿಆರ್​ಕೆ ಯುಟ್ಯೂಬ್​ನಲ್ಲಿ ‘ಜೇಮ್ಸ್’ನ ‘ಟ್ರೇಡ್​ಮಾರ್ಕ್’ ಹಾಡಿನ ಕನ್ನಡ ಅವತರಣಿಕೆ ರಿಲೀಸ್ ಆಗಿದೆ. ಒಟ್ಟು 5 ಭಾಷೆಗಳಲ್ಲಿ ಈ ಹಾಡು ರಿಲೀಸ್ ಆಗಿದ್ದು, ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಹಾಡಿಗೆ ಯುವರಾಜ್​ಕುಮಾರ್ ಧ್ವನಿ ನೀಡಿರೋದು ವಿಶೇಷ. ಅಷ್ಟೇ ಅಲ್ಲ ಸ್ಯಾಂಡಲ್​ವುಡ್​ನ ಮುಂಚೂಣಿಯ ನಾಯಕಿಯರಾದ ರಚಿತಾ ರಾಮ್, ಆಶಿಕಾ ರಂಗನಾಥ್ ಹಾಗೂ ಶ್ರೀಲೀಲಾ ಈ ಹಾಡಿನಲ್ಲಿ ಹೆಜ್ಜೆಹಾಕಿದ್ದಾರೆ.

ಚೇತನ್ ಕುಮಾರ್ ಆಕ್ಷನ್ ಕಟ್ ಹೇಳಿರುವ ‘ಜೇಮ್ಸ್​​’ಗೆ ಕಿಶೋರ್ ಪತ್ತಿಕೊಂಡ ಬಂಡವಾಳ ಹೂಡಿದ್ದಾರೆ. ಪ್ರಿಯಾ ಆನಂದ್ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಶರತ್ ಕುಮಾರ್, ರಂಗಾಯಣ ರಘು, ಸಾಧು ಕೋಕಿಲ, ಚಿಕ್ಕಣ್ಣ, ಸುಚೇಂದ್ರ ಪ್ರಸಾದ್ ಮೊದಲಾದವರು ಬಣ್ಣಹಚ್ಚಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲಿ ಜೇಮ್ಸ್ ರಿಲೀಸ್ ಆಗಲಿದೆ. ಪುನೀತ್ ಜನ್ಮದಿನವಾದ ಮಾರ್ಚ್ 17ರಂದು ಜೇಮ್ಸ್ ತೆರೆಗೆ ಬರಲಿದೆ.

See also  ನಟ ಪುನೀತ್​ ರಾಜ್​ಕುಮಾರ್ ಅಗಲಿಕೆ ನೋವನ್ನು ತಾಳಲಾರದೆ ಖಿನ್ನತೆಗೆ ಒಳಗಾಗಿದ್ದ ಅಭಿಮಾನಿ ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು