News Kannada
Friday, December 02 2022

ಸಾಂಡಲ್ ವುಡ್

ವಿಕ್ರಾಂತ್​ ರೋಣ ಸಿನಿಮಾ ಟೀಸರ್​ ರಿಲೀಸ್​ಗೆ ಡೇಟ್​ ಫಿಕ್ಸ್​

Photo Credit :

ಬೆಂಗಳೂರು : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ಅಭಿನಯದ, ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ‘ವಿಕ್ರಾಂತ್​ ರೋಣ’ ಸಿನಿಮಾದ ರಿಲೀಸ್ ಟೀಸರ್ ಏ.2ರ ಬೆಳಗ್ಗೆ 9.55ಕ್ಕೆ ಬಿಡುಗಡೆ ಆಗಲಿದೆ.

ವಿಕ್ರಾಂತ್​ ರೋಣ ಸಿನಿಮಾ ಸುದೀಪ್​ ಸಿನಿ ಕೆರಿಯರ್​ನಲ್ಲೇ ವಿಭಿನ್ನ ಸಿನಿಮಾ ಆಗಲಿದೆ. ಭಾರತ ಮಾತ್ರವಲ್ಲದೇ ವಿದೇಶಿ ಭಾಷೆಗಳಲ್ಲೂ ಚಿತ್ರ ತೆರೆಕಾಣಲಿದ್ದು, ಇದನ್ನು ಪ್ಯಾನ್​ ವರ್ಲ್ಡ್​ ಸಿನಿಮಾ ಎಂದೇ ಪರಿಗಣಿಸಲಾಗಿದೆ. ದುಬೈನ ಬುರ್ಜ್ ಖಲೀಫಾ ಮೇಲೆ ವಿಕ್ರಾಂಟ್​ ರೋನ ಸಿನಿಮಾ ಶೀರ್ಷಿಕೆ ಅನಾವರಣ ಮಾಡಿ ಸ್ಯಾಂಡಲ್​ವುಡ್​ನಲ್ಲಿ ಯಾರೂ ಮಾಡದ ದಾಖಲೆಯೊಂದನ್ನೂ ಚಿತ್ರ ತಂಡ ಬರೆದಿತ್ತು. ವಿಕ್ರಾಂತ್​ ರೋಣ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇದೀಗ ಇದೇ ಶನಿವಾರ ಯುಗಾದಿ ಹಬ್ಬದ ಶುಭದಿನದಂದು ಟೀಸರ್​ ಬಿಡುಗಡೆ ಆಗಲಿದೆ.

ಈ ಕುರಿತು ನಿರ್ದೇಶಕ ಅನೂಪ್ ಭಂಡಾರಿ, ‘ಏ.2ರಂದು ಬೆಳಗ್ಗೆ 9.55ಕ್ಕೆ ವಿಕ್ರಾಂತ್ ರೋಣದ ರಿಲೀಸ್ ಟೀಸರ್ ಬಿಡುಗಡೆ ಮಾಡುತ್ತೇವೆ’ ಎಂದು ಟ್ವೀಟ್ ಮೂಲಕ ಘೋಷಿಸಿದ್ದಾರೆ. ಈ ಸಿನಿಮಾಗೆ ಜಾಕ್​ ಮಂಜು ಬಂಡವಾಳವನ್ನು ಹೂಡಿದ್ದಾರೆ.

See also  ಅಭಿಮಾನಿಗಳಲ್ಲಿ ನಾನು ಅಪ್ಪುವನ್ನು ಕಾಣುತ್ತಿದ್ದೇನೆ; ನಟ ರಾಘವೇಂದ್ರ ರಾಜ್​ಕುಮಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು