News Kannada
Saturday, August 13 2022

ಸಾಂಡಲ್ ವುಡ್

ಕನ್ನಡದ ನಟಿ ಸಂಯುಕ್ತ ಹೆಗ್ಡೆ ಆಸ್ಪತ್ರೆಗೆ ದಾಖಲು - 1 min read

Kannada actress Samyuktha Hegde hospitalised

‘ಕಿರಿಕ್ ಪಾರ್ಟಿ’ ಚಿತ್ರದ ನಟಿ  ಸಂಯುಕ್ತ ಹೆಗ್ಡೆ ಕೆಲ ಸಮಯದಿಂದ ಚಿತ್ರರಂಗದಿಂದ ದೂರವಾಗಿದ್ದರು. ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸುತ್ತಿದ್ದ ಸಂಯುಕ್ತ ಇದೀಗ ಕ್ರೀಮ್  ಎಂಬ ಸಿನಿಮಾದಲ್ಲಿ  ನಟಿಸುತ್ತಿದ್ದಾರೆ. ಈ ವೇಳೆ ಸಾಹಸ ದೃಶ್ಯದ ಚಿತ್ರೀಕರಣದ ಗಾಯಗೊಂಡಿದ್ದು, ಅವರಿಗೆ ಈಗ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಫೈಟ್ ಮಾಸ್ಟರ್ ಪ್ರಭು ಸಮ್ಮುಖದಲ್ಲಿ ಈ ಸಾಹಸ ದೃಶ್ಯದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಅಚಾತುರ್ಯದಿಂದ ಸಂಯುಕ್ತ ಹೆಗ್ಡೆ ಅವರ ಕಾಲು ಹಾಗು ತಲೆಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಸಂಯುಕ್ತ ಹೆಗ್ಡೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇನ್ನು ಮುಂದೆ ಇಂತಹ ದೃಶ್ಯಗಳ ಚಿತ್ರೀಕರಣದ ಸಂದರ್ಭದಲ್ಲಿ ಡ್ಯೂಪ್ ಬಳಸುವಂತೆ ಸಂಬಂಧಪಟ್ಟವರು ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

 

See also  ಮೂಡಬಿದಿರೆ: ಏಳದೆ ಮಂದಾರ ರಾಮಾಯಣೊ -2022
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು