ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಅಭಿನಯ ಅವರಿಗೆ ವರದಕ್ಷಿಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ 2 ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ.
ಅಭಿನಯ ಅವರ ಅಣ್ಣ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮೀದೇವಿಗೆ ವರದಕ್ಷಿಣೆ ಬೇಡಿಕೆ, ಕಿರುಕುಳ ನೀಡಿದ ಆರೋಪದಲ್ಲಿ ಹೈಕೋರ್ಟ್ ವಿಚಾರಣೆ ನಡೆಸಿದ ಶಿಕ್ಷೆ ಪ್ರಕಟಿಸಿದೆ. 2002ರಲ್ಲಿ ಲಕ್ಷ್ಮೀದೇವಿ ಎಂಬುವವರು ಅಭಿನಯಾ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದರು.
ನಟಿ ಅಭಿನಯ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ರಿ ಅವರ ಏಕಸದಸ್ಯ ಪೀಠ ಆದೇಶ ನೀಡಿದೆ.
Photo Credit – Vaishali Bharath