News Kannada
Thursday, November 30 2023
ಸಾಂಡಲ್ ವುಡ್

ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ‘ನಟ ದರ್ಶನ್’

d boss
Photo Credit : News Kannada

ಬೆಂಗಳೂರು: ಮಹಿಳೆಯೊಬ್ಬರಿಗೆ ನಟ ದರ್ಶನ್ ಮನೆಯಲ್ಲಿ ಸಾಕಿದ್ದ ನಾಯಿಗಳು ದಾಳಿ ಮಾಡಿ ಗಾಯಗೊಳಿಸಿದ್ದವು. ಈ ಘಟನೆ ಸಂಬಂಧ ದೂರು ದಾಖಲಾಗಿತ್ತು. ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನಲೆ, ಇಂದು ಆರ್ ಆರ್ ನಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಮುಂದೆ ದರ್ಶನ್ ಹಾಜರಾಗಿದ್ದಾರೆ.

ಅಮಿತಾ ಜಿಂದಾಲ್​ ಎಂಬುವವರಿಗೆ ದರ್ಶನ್​ ಮನೆಯ ನಾಯಿ ಕಚ್ಚಿದ ಬಳಿಕ ಐಪಿಸಿ ಸೆಕ್ಷನ್​ 289ರ ಅಡಿಯಲ್ಲಿ ಕೇಸ್​ ದಾಖಲಾಗಿತ್ತು. ಆ ಪ್ರಕರಣದ ವಿಚಾರಣೆ ಚುರುಕುಗೊಂಡಿದೆ. ಈ ಪ್ರಕರಣದಲ್ಲಿ ಇಂದು ಬೆಳಗ್ಗೆ 11.30ಕ್ಕೆ ನಟ ದರ್ಶನ್ ಅವರು ರಾಜ ರಾಜೇಶ್ವರಿ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎನ್ನಲಾಗಿತ್ತು. ಅದರೇ ಆ ಸಮಯದ ಬದಲಾಗಿ ಇದೀಗ ನಟ ದರ್ಶನ್ ಆರ್ ಆರ್ ನಗರ ಪೊಲೀಸ್ ಠಾಣೆಗೆ ಹಾಜರಾಗಿ, ವಿಚಾರಣೆಗೆ ಒಳಗಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು