News Kannada
Sunday, December 10 2023
ಮನರಂಜನೆ

ಕಾವೇರಿ ಹೋರಾಟಕ್ಕೆ ಧುಮಿಕಿದ ನಟ ದರ್ಶನ್‌

darshan
Photo Credit : Twitter

ಬೆಂಗಳೂರು: ಕಾವೇರಿ ನದಿಯ ನೀರನ್ನು ರಾಜ್ಯ ಸರ್ಕಾರವು ತಮಿಳುನಾಡಿಗೆ ಹರಿಸುತ್ತಿದೆ. ಸರ್ಕಾರದ ನಡೆಯನ್ನು ವಿರೋಧಿಸಿ ರೈತರು ಹಾಗೂ ಕನ್ನಡಪರ ಸಂಘಟನೆಗಳು ಕಾವೇರಿ ಉಳಿವಿಗಾಗಿ ಹೋರಾಟ ಆರಂಭಿಸಿದ್ದಾರೆ.

ಈ ಕುರಿತು ಕನ್ನಡಪರ ಸಂಘಟನೆಗಳು ಸ್ಯಾಂಡಲ್‌ವುಡ್‌ ನಟರು ಕಾವೇರಿ ಚಳವಳಿಗೆ ಭಾಗವಹಿಸಬೇಕು ಎಂದು ಧಿಕ್ಕಾರ ಕೂಗಿದ ಬೆನ್ನಲ್ಲಿಯೇ ನಟ ದರ್ಶನ್‌ ತೂಗುದೀಪ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಈ ಕರಿತು ಟ್ವೀಟ್‌ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿಕೊಂಡಿರುವ ದರ್ಶನ್‌ ತೂಗುದೀಪ “ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ” ಎಂದು ಕರ್ನಾಟಕ ರೈತರು ಹಾಗೂ ಕನ್ನಡಪರ ಸಂಘಟನೆಗಳಿಗೆ ಬೆಂಬಲ ಸೂಚಿಸಿದ್ದಾರೆ.

See also  ಬಂಟ್ವಾಳ: ಸುರಿಬೈಲು ನಿವಾಸಿ ಸಮಾದ್ ಶವ ಮನೆಯವರಿಗೆ ಹಸ್ತಾಂತರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು