ಶಿವರಾಜ್ಕುಮಾರ್ ಅವರು ‘ಘೋಸ್ಟ್’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರೋಕೆ ರೆಡಿ ಆಗಿದ್ದಾರೆ. ಈಗ ಈ ಚಿತ್ರದ ಸಾಂಗ್ ರಿಲೀಸ್ ಆಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ. ಈ ಸಾಂಗ್ ಕಂಪೋಸರ್ ಅರ್ಜುನ್ ಜನ್ಯಾಗೆ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ.
ಅರ್ಜುನ್ ಜನ್ಯಾ ಅವರು ಮ್ಯೂಸಿಕ್ ಕಂಪೋಸರ್ ಆಗಿ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಇದ್ದಾರೆ. ಅವರು ವಿವಿಧ ರೀತಿಯ ಹಾಡುಗಳನ್ನು ನೀಡಿ ಗಮನ ಸೆಳೆದಿದ್ದಾರೆ. ‘ಒಎಂಜಿ ಮ್ಯೂಸಿಕ್’ ರಿಲೀಸ್ ಮಾಡಲಾಗಿದೆ. ಒಂದೇ ವಿಡಿಯೋದಲ್ಲಿ ಕನ್ನಡ, ಮಲಯಾಳಂ, ತಮಿಳಿನ ಲಿರಿಕ್ಸ್ ಇದೆ. ಪೂರ್ತಿ ಹಾಡನ್ನು ಕೇಳೋಕೆ ಅಭಿಮಾನಿಗಳು ಕಾದಿದ್ದಾರೆ. ಸದ್ಯ, ಹಾಡಿನ ತುಣುಕಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಕೇಳಿ ಬರುತ್ತಿದೆ.
‘ಘೋಸ್ಟ್’ ಚಿತ್ರವನ್ನು ಶ್ರೀನಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಶಿವರಾಜ್ಕುಮಾರ್, ಅನುಪಮ್ ಖೇರ್, ಪ್ರಶಾಂತ್ ನಾರಾಯಣ್, ಅರ್ಚನಾ ಜೋಯಿಸ್, ಸತ್ಯಪ್ರಕಾಶ್, ದತ್ತಣ್ಣ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಶ್ರೀನಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.