News Karnataka Kannada
Thursday, April 25 2024
ಸಾಂಡಲ್ ವುಡ್

ಜನಪ್ರಿಯ ನಟ, ನಿರ್ದೇಶಕ ರಿಷಬ್‌ ಮಹತ್ವದ ಘೋಷಣೆ

Actor Rishab Shetty honoured with Dadasaheb Phalke Award
Photo Credit : News Kannada

ಮಂಗಳೂರು: ಜನಪ್ರಿಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಟ ರಿಷಬ್‌ ಶೆಟ್ಟಿ ಹುಟ್ಟೂರು ಕೆರಾಡಿ ಹೆಸರಿನಲ್ಲಿ ʼಕೆರಾಡಿ ಸ್ಟುಡಿಯೋಸ್‌ʼ ಹುಟ್ಟುಹಾಕಿದ್ದು, ಸಿನಿಮಾ ಸಂಬಂಧಿತ ಪ್ರಚಾರ, ಮಾರ್ಕೆಟಿಂಗ್‌ , ಇವೆಂಟ್‌ ಲಾಂಚ್‌ ಮುಂತಾದ ಕೆಲಸಕ್ಕಾಗಿ ʼಕೆರಾಡಿ ಸ್ಟುಡಿಯೋಸ್‌ʼ ಬಳಕೆಯಾಗಲಿದೆ.

ಈ ಬಗ್ಗೆ ರಿಷಬ್‌ ಹೀಗೆ ಟ್ವೀಟ್‌ ಮಾಡಿದ್ದಾರೆ. ಒಂದು ಸಿನಿಮಾದ ಗೆಲುವಿಗೆ ಅದರ ನಿರ್ಮಾಣದಷ್ಟೇ, ಪ್ರಚಾರದ ಅಗತ್ಯವೂ ಇದೆ.. ಕಳೆದ ಕೆಲವು ವರ್ಷಗಳಲ್ಲಿ ಸಿನಿಮಾಗಳನ್ನು ನಿರ್ಮಾಣ ಮಾಡಿ ಅದನ್ನು ಸೂಕ್ತ ಪ್ರಚಾರದ ಮೂಲಕ ಜನರಿಗೆ ತಲುಪಿಸಿದ ಅನುಭವದೊಂದಿಗೆ ಇಂದು ನಮ್ಮ ತಂಡ ಹೊಸ ಹೆಜ್ಜೆ ಇರಿಸುತ್ತಿದೆ, ‘ಕೆರಾಡಿ ಸ್ಟುಡಿಯೋಸ್ ಎಂಬ ವೇದಿಕೆಯ ಮೂಲಕ ಚಿತ್ರಗಳ ಮಾರ್ಕೆಟಿಂಗ್, ಪ್ರಚಾರ ಮತ್ತು ಇತರ ಸೇವೆಗಳನ್ನು ಪ್ರಾರಂಭಿಸಿದ್ದೇವೆ. ಇದು ಉತ್ತಮ ಚಿತ್ರಗಳು ಮತ್ತು ಪ್ರೇಕ್ಷಕರ ನಡುವೆ ಸೇತುವೆ ಆಗಬೇಕೆಂಬುದೇ ನಮ್ಮ ಆಶಯ.

ಅಂದ ಹಾಗೆ ಕೆರಾಡಿ.. ನಾನು ಹುಟ್ಟಿ ಬೆಳೆದ, ನನ್ನ ಹೃದಯಕ್ಕೆ ಬಹಳ ಹತ್ತಿರವಾದ ಊರು. ಎಲ್ಲಕ್ಕಿಂತಲೂ ಹೆಚ್ಚಾಗಿ, ನನ್ನೊಳಗೆ ಸಿನಿಮಾದ ಕನಸು ಹುಟ್ಟಿದ್ದು ಇಲ್ಲೇ! ಈ ಪ್ರಯತ್ನವನ್ನು ನನ್ನ ಕೆರಾಡಿಗೆ ಅರ್ಪಿಸಿ, ಚಿತ್ರರಂಗಕ್ಕೆ ನಮ್ಮ ಅಳಿಲು ಸೇವೆಯನ್ನು ಮುಂದುವರೆಸಲಿದ್ದೇವೆ. ನಿಮ್ಮ ಸಹಕಾರವಿರಲಿ ಎಂದು ರಿಷಬ್‌ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು